ಎಂಬಿಬಿಎಸ್ ಸೀಟು ಹೆಚ್ಚಳ: ವಿವರ ಒದಗಿಸಲು ಹೈಕೋರ್ಟ್‌ ನಿರ್ದೇಶನ

Picture of Savistara

Savistara

Bureau Report

ಬೆಂಗಳೂರು: ‘2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಸೀಟುಗಳ ಹಂಚಿಕೆಗಾಗಿ ಕೌನ್ಸೆಲಿಂಗ್‌ ಆರಂಭವಾದ ನಂತರ ಕರ್ನಾಟಕದ ವೈದ್ಯಕೀಯ ಕಾಲೇಜುಗಳಿಗೆ ಹಾಗೂ ಇಡೀ ದೇಶದಲ್ಲಿರುವ ವೈದ್ಯಕೀಯ ಕಾಲೇಜುಗಳಿಗೆ ಎಷ್ಟು ಸಂಖ್ಯೆಯ ಎಂಬಿಬಿಎಸ್ ಸೀಟುಗಳ ಹೆಚ್ಚಳ ಮಾಡಲಾಗಿದೆ ಎಂಬ ಬಗೆಗಿನ ವಿವರಗಳನ್ನು ಒದಗಿಸಿ’ ಎಂದು ಹೈಕೋರ್ಟ್, ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ (ಎನ್‌ಎಂಸಿ)ಗೆ ನಿರ್ದೇಶಿಸಿದೆ.

ಎಂಬಿಬಿಎಸ್‌ ಮತ್ತು ಬಿಡಿಎಸ್ ಕೋರ್ಸ್‌ಗಳಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡುವ ಹಿನ್ನೆಲೆಯಲ್ಲಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂರನೇ ಸುತ್ತಿನ ಕೌನ್ಸೆಲಿಂಗ್‌ ನಡೆಸುತ್ತಿರುವ ವಿಧಾನವನ್ನು ಪ್ರಶ್ನಿಸಿ ಎಂಬಿಬಿಎಸ್ ಸೀಟು ಆಕಾಂಕ್ಷಿ ವಿದ್ಯಾರ್ಥಿಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್‌ ಬ್ಯಾನರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಅದೇಶಿಸಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025ರ ಅಕ್ಟೋಬರ್ 24ರಂದು ಮೂರನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಿತ್ತು. ಆದರೆ, ನ್ಯಾಯಾಲಯದ ಮಧ್ಯಂತರ ನಿರ್ದೇಶನದ ಮೇರೆಗೆ ಸೀಟು ಹಂಚಿಕೆ ಪ್ರಕ್ರಿಯೆ ಅಕ್ಟೋಬರ್ 26ರಂದು ಆರಂಭವಾಗಿತ್ತು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!