ಶಬರಿಮಲೆ; ಮಿದುಳು ತಿನ್ನುವ ಅಮೀಬಾ : ಯಾತ್ರಿಕರಿಗೆ ಮಾರ್ಗಸೂಚಿ ಪ್ರಕಟ

Picture of Savistara

Savistara

Bureau Report

ಮಂಗಳೂರು/ಉಡುಪಿ: ಕೇರಳದಲ್ಲಿ ನೇಗೇರಿಯಾ ಫೌಲೇರಿ ಯಿಂದ ಉಂಟಾಗುವ ಅಮೀಬಿಕ್ ನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆಗೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.ನೇಗೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊ ಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ.ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ ಅಥವಾ ನಿಮ-¾ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವ್ರ ತಲೆನೋವು, ವಾಕರಿಕೆ, ವಾಂತಿ, ಕುತ್ತಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

3 ಲಕ್ಷ ಭಕ್ತರಿಂದ ಅಯ್ಯಪ್ಪ ದರ್ಶನ

ಶಬರಿಮಲೆ: ಮಂಡಲ -ಮಕರವಿಳಕ್ಕು ಯಾತ್ರೆಗಾಗಿ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆದ ಬಳಿಕ ಇದುವರೆಗೆ ಸುಮಾರು ಮೂರು ಲಕ್ಷ ಭಕ್ತರು ಸನ್ನಿಧಾನದಲ್ಲಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.ಅಧಿಕೃತ ಅಂಕಿಅಂಶ ಪ್ರಕಾರ ನ. 19ರಂದು ಸಂಜೆ 5 ಗಂಟೆಯವರೆಗೆ 2,98,310 ಜನರು ಭೇಟಿ ನೀಡಿದ್ದಾರೆ ನ. 16 ರಂದು 53,278, 17ರಂದು 98,915, 18ರಂದು 81,543 ಮತ್ತು 19ರಂದು ಸಂಜೆ 5 ಗಂಟೆಯವರೆಗೆ 64,574 ಭಕ್ತರ ಸಂಖ್ಯೆ ಇತ್ತು.ವರ್ಚುವಲ್ ಕ್ಯೂ ಮೂಲಕ ಶಬರಿಮಲೆ ತಲುಪುವ ಎಲ್ಲ ಭಕ್ತರಿಗೆ ಸುಗಮ ದರ್ಶನವನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಎಡಿ ಜಿ.ಪಿ.ಎಸ್. ಶ್ರೀಜಿತ್ ಹೇಳಿದರು.ಬುಕ್ ಮಾಡಿ ಬಂದು ದರ್ಶನ ಪಡೆಯದವರು ಪೊಲೀಸರಿಗೆ ಮಾಹಿತಿ ನೀಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಪ್ರಸ್ತುತ ಯಾತ್ರೆಗೆ ಸಂಬಂಧಿಸಿದಂತೆ 3,500 ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದೆ. ಸನ್ನಿಧಾನಂನಲ್ಲಿ ಮಾತ್ರ 1,700ಕ್ಕೂ ಹೆಚ್ಚು ಪೊಲೀಸ್‌ ಸಿಬಂದಿ ಇದ್ದಾರೆ. ತೀರ್ಥಯಾತ್ರೆಯ ಋತುವಿನ ಉದ್ದಕ್ಕೂ 18,000ಕ್ಕೂ ಹೆಚ್ಚು ಪೊಲೀಸ್ ಸಿಬಂದಿಯನ್ನು ನಿಯೋ ಜಿಸಲಾಗುವುದು ಎಂದು ಅವರು ಹೇಳಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!