ಬದಲಾವಣೆಗೆ, ವ್ಯಕ್ತಿಗಳ ಸ್ವಾವಲಂಬನೆ ಬದುಕಿಗೆ ಸಹಕಾರ ಕ್ಷೇತ್ರ ಪಾತ್ರ ಮುಖ್ಯವಾಗಿದೆ: ಕ್ಯಾ. ಬ್ರಿಜೀಶ್ ಚೌಟ |ಸುಳ್ಯದ ಅಡಿಕೆ ಹಳದಿ , ಎಲೆ ಚುಕ್ಕಿ ರೋಗಬಾದೆ ಪರಿಸರಕ್ಕೆ ಶೀಘ್ರವಾಗಿ ಕ್ರೆಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ – ಕ್ಯಾ. ಚೌಟ

Picture of Savistara

Savistara

Bureau Report

ಸಹಕಾರಿ‌ ಕ್ಷೇತ್ರವು ಸಮಾಜದ ಎಲ್ಲ ವರ್ಗದ ಜನರನ್ನು ತಲುಪಿದೆ. ಸಹಕಾರಿ ಸಂಘದ ಮೂಲ ತತ್ವ ಸಮಗ್ರ ಅಭಿವೃದ್ಧಿಯಾಗಿದೆ ಯೆಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ಕನಕಮಜಲು ‌ಸಹಕಾರಿ‌ ಸಂಘ ನಿ. ಜಾಲ್ಸೂರು ಇದರ ಆಶ್ರಯದಲ್ಲಿ‌ ವಿನೋಬಾನಗರದಲ್ಲಿ ನಡೆದ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ

ಈ ಭಾಗದ ಅಡಿಕೆ ಬೆಳೆಗಾರರ ಹಿತ ದೃಷ್ಟಿಯಿಂದ ಪ್ರಯತ್ನ ನಡೆಸಿದ್ದು, ಈ ಭಾಗದ ಸಮಸ್ಯೆಯನ್ನು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತರಲಾಗಿದೆ. ಈಗಾಗಲೇ ಚರ್ಚೆಗಳು‌ ನಡೆದಿದ್ದು ಮುಂದಿನ ತಿಂಗಳು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಣ್ ಈ ಭಾಗಕ್ಕೆ ಬಂದು ಕೃಷಿಕರೊಂದಿಗೆ ಸಂವಾದ ನಡೆಸುವ ಭರವಸೆ ನೀಡಿದ್ದಾರೆ ಈ ನಿಟ್ಟಿನಲ್ಲಿ ಎಲ್ಲಾ ಅಡಿಕೆ ಬೆಳೆಗಾರ ವ್ಯಾಪ್ತಿಯ ಸಂಸದರು ಕೈಜೋಡಿಸಿದ್ದಾರೆಂದರು.

ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿದ್ದರು. ಶಾಸಕಿ ಭಾಗೀರಥಿ ಮುರುಳ್ಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಸಹಕಾರ ಸಪ್ತಾಹದ ಅಂಗವಾಗಿ ನಡೆದ ಕ್ರೀಡೋತ್ಸವದ ಬಹುಮಾನವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ವಿತರಿಸಿದರು.

ಸನ್ಮಾನ : ಸಮಾರಂಭದಲ್ಲಿ ಹಿರಿಯ ಸಹಕಾರಿ ಗಳಾದ ಜಾಕೆ‌ ಮಾಧವ ಗೌಡ, ದಿವಾಕರ ರೈ ಪಿ.ಬಿ., ನಿತ್ಯಾನಂದ ಮುಂಡೋಡಿ, ತೀರ್ಥರಾಮ ಎ.ಬಿ., ವಸಂತ ಜಿ.‌ಗಬ್ಬಲಡ್ಕ, ಜಯರಾಮ ರೈ ಕುರಿಯ ಹಾಗೂ 2025 ನೇ ಸಾಲಿನ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಪಿ.ಸಿ.ಜಯರಾಮರನ್ನು ಸನ್ಮಾನಿಸಲಾಯಿತು.

ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಡ್ಗಿ ಸನ್ಮಾನ ನೆರವೇರಿಸಿದರು.ಶತಮಾನೋತ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ 2024-25 ನೇ ಸಾಲಿನಲ್ಲಿ ನಿವೃತ್ತರಾದ ಸುಳ್ಯ ತಾಲೂಕಿನ ಸಹಕಾರ ಸಂಘಗಳ ನಿವೃತ್ತ ಸಿಬ್ಬಂದಿಗಳಿಗೆ ಗೌರವಾರ್ಪಣೆ ನಡೆಯಿತು.ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ ಗೌರವಾರ್ಪಣೆ ನಡೆಸಿದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ಮೂಲೆತೋಟ, ದ.ಕ. ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಭರತ್ ನೆಕ್ರಾಜೆ, ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ., ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಕನಕಮಜಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಸೋಣಂಗೇರಿ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ರೈ ಎಸ್.ಎ. ಭಾಗವಹಿಸಿದ್ದರು.

ವಿಚಾರ ಮಂಡನೆ : ಸಹಕಾರ ಸಪ್ತಾಹ ಸಮಾರಂಭದಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು ಎಂಬ ವಿಚಾರದಲ್ಲಿ ಡಿಸಿಸಿ ಬ್ಯಾಂಕ್ ನ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ನಾಯರ್ ಮಾತನಾಡಿದರು.

ಚಾಲನೆ : ಸಹಕಾರಿ ಸಪ್ತಾಹಕ್ಕೆ ಬೆಳಗ್ಗೆ ಕನಕಮಜಲು ಸಹಕಾರ ಸಂಘದ ವಠಾರದಲ್ಲಿ ಕನಕಮಜಲು ಹಾಲು ಉತ್ಪಾದಕರ ಸಹಕಾರ ಸಂಘದ‌ ಅಧ್ಯಕ್ಷ ರಾಮಪ್ರಸಾದ್ ಭಟ್ ಜಿ‌ ಚಾಲನೆ ನೀಡಿದರೆ, ವಾಹನ ಜಾಥಾಕೆ ಕನಕಮಜಲು ಸಹಕಾರ ಸಂಘದ ಮಾಜಿ ಅಧ್ಯಕ್ಷ ಚೆನ್ನಕೇಶವ ಜಾಲ್ಸೂರು ಚಾಲನೆ ನೀಡಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಕನಕಮಜಲು ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ರವರು ಸಹಕಾರಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ ಪುಷ್ಪ‌ನಮನ ಸಲ್ಲಿಸಲಾಯಿತು.‌ ದ.ಕ.‌ಜಿಲ್ಲಾ‌ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ.‌ಹಿರೇಮಠ, ಕನಕಮಜಲು ಸಹಕಾರಿ ಸಂಘದ ಉಪಾಧ್ಯಕ್ಷ ವೆಂಕಪ್ಪ ನಾಯ್ಕ ದೇರ್ಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕೆ., ಆಡಳಿತ ಮಂಡಳಿ ನಿರ್ದೇಶಕರುಗಳಾದ ಡಾ.ಗೋಪಾಲಕೃಷ್ಣ ಭಟ್, ಕುಸುಮಾಧರ ಅರ್ಭಡ್ಕ, ಗಂಗಾಧರ ಗೌಡ ಕಾಳಮನೆ, ತಿಲೋತ್ತಮ ಕೊಲ್ಲಂತಡ್ಕ, ಸುನಿಲ್ ಅಕ್ಕಿಮಲೆ, ಗಂಗಾಧರ ರೈ ಸೋಣಂಗೇರಿ, ಸಂದೀಪ್ ಕದಿಕಡ್ಕ, ಶ್ರೀಮತಿ ದಮಯಂತಿ ಲಿಂಗಪ್ಪ ಗೌಡ ಅಡ್ಕಾರು,

ಶ್ರೀಮತಿ ವಿನುತ ಸಾರಕೂಟೇಲು, ನಿರಂಜನ ಬೊಳುಬೈಲು, ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ರತನ್ ಕೆ.ಎಸ್. ವೇದಿಕೆಯಲ್ಲಿ ಇದ್ದರು. ಕನಕಮಜಲು ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.ಬೆಟ್ಟಂಪಾಡಿ ಡಿಗ್ರಿ ಕಾಲೇಜು ಪ್ರಾಂಶುಪಾಲ ದಾಮೋದರ ಕಣಜಾಲು‌ ಹಾಗೂ ಪ್ರಸಾದ್ ಕಾಟೂರು ಕಾರ್ಯಕ್ರಮ ನಿರೂಪಿಸಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!