ಪೊಲೀಸ್‌ ಕುಟುಂಬದ ಮಕ್ಕಳಿಗೂ ಸಿಇಟಿಯಲ್ಲಿ ಅವಕಾಶ: ಜಿ.ಪರಮೇಶ್ವರ

Picture of Savistara

Savistara

Bureau Report

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಇದುವರೆಗೂ 180 ಜನ ಮೀಸಲಾತಿ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದ ಆಡುಗೋಡಿ ಸಿಎಆರ್ ಕವಾಯತು ಮೈದಾನದಲ್ಲಿ ಗುರುವಾರ ನಡೆದ ‘ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025’ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.’ಕ್ರೀಡಾ ಮೀಸಲಾತಿಯ ಸದ್ಬಳಕೆ ಮಾಡಿಕೊಂಡು 180 ಜನ ಪಿಎಸ್‌ಐ ಹಾಗೂ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ನೇಮಕಾತಿ ಆಗಿದ್ದಾರೆ. ಅದೇ ರೀತಿ, ಪೊಲೀಸ್ ಕುಟುಂಬದಿಂದ ಬಂದ ಮಕ್ಕಳಿಗೆ ಸಿ.ಇ.ಟಿಯಲ್ಲೂ ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.`ಕ್ರೀಡೆ ದೈಹಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ನಮ್ಮನ್ನು ಹೆಚ್ಚು ಸದೃಢಗೊಳಿಸುತ್ತದೆ. ಜೀವನದ ಅನೇಕ ಸಂದರ್ಭಗಳಲ್ಲಿ ಸೋಲು-ಗೆಲುವುಗಳ ಅನುಭವಗಳು ಎದುರಾಗುತ್ತವೆ. ಸೋತಾಗ ನಿರಾಶೆ ಆಗುತ್ತದೆ. ಕ್ರೀಡೆಗಳು ಆತ್ಮಸ್ಥೆರ್ಯ ಹೆಚ್ಚಿಸುತ್ತದೆ’ ಎಂದು ಹೇಳಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಹಾಜರಿದ್ದರು.

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!