ವಿನೋಬಾನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಹಬ್ಬ | ದೇಶವನ್ನು ಕಟ್ಟುವ ಪ್ರತಿಭೆಯನ್ನು ಸೃಷ್ಟಿಮಾಡುವ ಶಿಕ್ಷಣ : ಕು| ಭಾಗೀರಥಿ ಮುರುಳ್ಯ

Picture of Savistara

Savistara

Bureau Report

ಜಾಲ್ಲೂರು ಗ್ರಾಮದ ವಿನೋಬಾನಗರ ರಾಷ್ಟೋತ್ಥಾನ ಶಿಶುಮಂದಿರ ಟ್ರಸ್ಟ್ ಇದರ ಆಶ್ರಯದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ವಾರ್ಷಿಕ ಹಬ್ಬ ನ.೨೧ರಂದು ನಡೆಯಿತು.ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ನ.ಸೀತಾರಾಮರವರು ಧ್ವಜಾರೋಹಣ ನೆರವೇರಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. “ಕೇವಲ ಪುಸ್ತಕದಲ್ಲಿ ಇದ್ದುದನ್ನು ಮಾತ್ರ ಕಲಿತರೆ ಸಾಕಾಗುವುದಿಲ್ಲ. ಸಮಾಜದಲ್ಲಿ ಹೇಗೆ ಬದುಕಬೇಕೆಂದು ಕಲಿಸುವ ಶಿಕ್ಷಣ ಇಂದಿನ ಅಗತ್ಯ. ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕುಟುಂಬ ಪದ್ಧತಿಯ ಶಿಕ್ಷಣ ದೊರೆಯುತ್ತದೆ. ದೇಶವನ್ನು ಕಟ್ಟುವ ಪ್ರತಿಭೆಯನ್ನು ಸೃಷ್ಟಿಮಾಡುವ ಶಿಕ್ಷಣವೂ ಇಲ್ಲಿದೆ’ ಎಂದರು.ವಾರ್ಷಿಕ ಹಬ್ಬವನ್ನು ಬೆಂಗಳೂರಿನ ಸೀತಾ ಐಸ್‌ಕ್ರಿಮ್ಸ್ ಪ್ರೈ.ಲಿ. ಇದರ ಮ್ಯಾನೇಜಿಂಗ್ ಡೈರೆಕ್ಟರ್ ಗಿರಿಯಪ್ಪ ಗೌಡ ಕಾಪಿಲ ನೆರವೇರಿಸಿದರು.

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮುರಳೀಧರ ಕೆ., ಜಾಲ್ಲೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಕ್ಷೇತ್ರ ಶಿಕ್ಷಣಾಧಿಕಾರಿ ಯು.ಕೆ. ಶೀತಲ್, ಶಿಕ್ಷಣ ಸಂಯೋಜಕಿ ಶ್ರೀಮತಿ ಧನಲಕ್ಷ್ಮಿ ಕುದ್ದಾಜೆ, ವಿದ್ಯಾಸಂಸ್ಥೆಯ ಕೋಶಾಧಿಕಾರಿ ಸುಧಾಕರ ಕಾಮತ್ ಕೆ., ಉಪಾಧ್ಯಕ್ಷರಾದ ಹೇಮಂತ್ ಕಾಮತ್, ಶಾಲಾ ಸಂಚಾಲಕರಾದ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರುಗಳಾದ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಪುರುಷೋತ್ತ ಕಿರ್ಲಾಯ, ಶ್ರೀಮತಿ ಲತಾ ಮಧುಸೂದನ್, ಶಿವಪ್ರಸಾದ್ ಉಗ್ರಾಣಿಮನೆ, ಹೇಮಂತ್ ಮಠ, ರಾಷ್ಟೋತ್ಥಾನ ಶಿಶು ಮಂದಿರದ ಅಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು, ಉಪಾಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ, ಎಸ್‌.ಡಿ.ಎಂ.ಸಿ. ಅಧ್ಯಕ್ಷರಾದ ರವಿರಾಜ್ ಗಬ್ಬಲಡ್ಕ, ಉಪಾಧ್ಯಕ್ಷರಾದ ಮಣಿಕಂಠ ಹಾಸ್ಪಾರೆ, ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಆಶೋಕ್‌ ಅಡ್ಕಾರ್, ಉಪಾಧ್ಯಕ್ಷೆ ಶ್ರೀಮತಿ ಜಲಜ ಆಚಾರ್ಯ, ವಿದ್ಯಾರ್ಥಿ ನಾಯಕ ಜಶ್ವಿತ್‌ ಉಪಸ್ಥಿತರಿದ್ದರು.

ಸಂಸ್ಥೆಯ ಸಂಚಾಲಕರಾದ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗಿರೀಶ್ ಕುಮಾರ್ ವಾರ್ಷಿಕ ವರದಿ ವಾಚಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ಜಯಪ್ರಸಾದ್ ಕಾರಿಂಜ ವಂದಿಸಿದರು. ಪ್ರೌಢಶಾಲಾ ಶಿಕ್ಷಕರುಗಳಾದ ಅನಿಲ್ ಅಕ್ಕಪ್ಪಾಡಿ ಮತ್ತು ದಿವ್ಯ ಬಿ.ಕಾರ್ಯಕ್ರಮ ನಿರೂಪಿಸಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!