ನವೆಂಬರ್ 23 ರಂದು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ಮಂಗಳೂರಿನಲ್ಲಿ ನಮೋ ಚೆಸ್ ಟೂರ್ನಮೆಂಟ್ ಆಯೋಜನೆ

Picture of Savistara

Savistara

Bureau Report

ಮಂಗಳೂರು: ಸಂಸದ್‌ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್‌ ಟೂರ್ನಮೆಂಟ್‌ ‘ ಆಯೋಜಿಸಲಾಗಿದೆ. ನಗರದ ಯುಎಸ್‌ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್‌ ಟೂರ್ನಮೆಂಟ್‌ ನಡೆಯಲಿದೆ. ಈಗಾಗಾಲೇ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು 500ಕ್ಕೂ ಹೆಚ್ಚು ಆಸಕ್ತರಿಂದ ನೋಂದಾವಣೆಯಾಗಿದ್ದು, ಸಬ್ ಜ್ಯೂನಿಯರ್ (U-10)Boys & Girls , ಜ್ಯೂನಿಯರ್ (U-15) Boys & Girls , ಓಪನ್ ಕೆಟಗರಿ ಈ ಮೂರು ವಿಭಾಗದಲ್ಲಿ ಟೂರ್ನಮೆಂಟ್‌ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಅಂದು ಬೆಳಗ್ಗೆ8ಕ್ಕೆ ತಪ್ಪದೇ ಕಡ್ಡಾಯವಾಗಿ ಹೆಸರು ನೋಂದಾಯಿಸಬೇಕಾಗಿದ್ದು, 8.30 ಕ್ಕೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ ಫಿಟ್‌ ಯುವ ಪರಿಕಲ್ಪನೆಯಡಿ ಈ ಕ್ರೀಡಾ ಮಹೋತ್ಸವ ಆಯೋಜಿಸಲಾಗಿದೆ.

ನ.23ರ ಬಳಿಕ ಪ್ರತಿ ವಾರವು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ವಾಲಿಬಾಲ್, ತ್ರೋಬಾಲ್, ಕುಸ್ತಿ, ಕಬ್ಬಡ್ಡಿ, ಹಗ್ಗ – ಜಗ್ಗಾಟ, ಕ್ರಿಕೆಟ್, ಬ್ಯಾಡ್ಮಿಂಟನ್ ಪಂದ್ಯಾಟಗಳನ್ನು ಆಯೋಜಿಸಲಾಗುತ್ತದೆ. ಈ ವಾರ ಚೆಸ್ ಟೂರ್ನಮೆಂಟ್ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳು, ಯುವಕರು ಸೇರಿ ಕ್ರೀಡಾಸಕ್ತರು ಈ ಟೂರ್ನಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್,ವಿ.ಪ.ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನೀಲ್ ಅಚಾರ್, ಜಿಲ್ಲಾಧ್ಯಕ್ಷ ಅಮರಶ್ರೀ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!