ನಾನು 140 ಶಾಸಕರ ಅಧ್ಯಕ್ಷ; ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ: ಡಿ.ಕೆ.ಶಿವಕುಮಾರ್

Picture of Savistara

Savistara

Bureau Report

ಬೆಂಗಳೂರು : “ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರು ಸ್ಪಷ್ಟಪಡಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾ‌ರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ಕೆಲವು ಶಾಸಕರು, ಮಂತ್ರಿಗಳು ದಿಲ್ಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ ಮೀಟಿಂಗ್ ನಡೆಯುತ್ತಿದೆ ಎಂದು ಕೇಳಿದಾಗ, “ಯಾವ ಗುಂಪನ್ನು ದಿಲ್ಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ.ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ’ ಎಂದು ತಿಳಿಸಿದರು.

ಸಿಎಂಗೆ ‘ಆಲ್ ದಿ ಬೆಸ್ಟ್’ :

“ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ” ಎಂದರು.ಯಾರೇ ಆದರೂ ಆಡಿದ ಮಾತು ಮುಖ್ಯ ಅಲ್ಲವೇ ಎಂದು ಕೇಳಿದಾಗ, “ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದರು.ಸತೀಶ್‌ ಜಾರಕಿಹೊಳಿ ಅವರು ಡಿನ್ನರ್ ಸಭೆ ಮಾಡಿರುವ ಬಗ್ಗೆ ಕೇಳಿದಾಗ, “ನನಗೆ ಡಿನ್ನರ್ ಸಭೆಗಳ ಬಗ್ಗೆ ಗೊತ್ತಿಲ್ಲ. ನಾಲೈದು ಡಿಸಿಎಂ ಮಾಡಬೇಕು, ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಎರಡೂವರೆ ವರ್ಷಗಳಿಂದ ಡಿನ್ನ‌ರ್ ಸಭೆಗಳನ್ನು ಮಾಡುತ್ತಲೇ ಇದ್ದಾರೆ. ಇನ್ನು ಹೆಚ್ಚು ಸಭೆಗಳನ್ನು ಮಾಡಲಿ” ಎಂದು ತಿಳಿಸಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!