ಕರಾವಳಿಯಲ್ಲಿ ಚಳಿ ಹೆಚ್ಚಳ

Picture of Savistara

Savistara

Bureau Report

ಮಂಗಳೂರು: ಕರಾವಳಿಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಚಳಿ ಹೆಚ್ಚಾಗಿದ್ದು, ದಟ್ಟ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ದಿನದಿಂದ ದಿನಕ್ಕೆ ಚಳಿಯ ಅನುಭವ ಹೆಚ್ಚಾಗುತ್ತಿದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆ ಕಾಣುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಚಳಿಯ ವಾತಾವರಣ, ಶೀತ ಗಾಳಿ ಬೀಸಿದೆ. ಶೀತ, ಕೆಮ್ಮು, ಬಿಸಿಲು, ಮೋಡದ ವಾತಾವರಣ, ರಾತ್ರಿ ಮತ್ತೆ ಹೆಚ್ಚಿನ ಚಳಿಯವೈರಲ್ ಜ್ವರ ಅನುಭವವಾಗಿದೆ. ಏರಿಕೆ ಶ್ರೀಲಂಕಾದಲ್ಲಿ ಕಾಣಿಸಿಕೊಂಡಿರುವ ಚಂಡಮಾರುತದ ಪರಿಣಾಮ ಅರಬ್ಬಿ ಸಮುದ್ರತೀರದುದ್ದಕ್ಕೂ ಗಾಳಿಯ ವೇಗ ಹೆಚ್ಚಾಗಿತ್ತು. ಇದರಿಂದ ಕರಾವಳಿಯಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಬೆಳಗ್ಗಿನ ಜಾವ ದಟ್ಟ ಮಂಜು ಮುಸುಕಿದ ವಾತಾವರಣವಿತ್ತು. ಸುಳ್ಯ, ಪುತ್ತೂರು, ಬೆಳ್ತಂಗಡಿ ಮೊದಲಾದ ಗ್ರಾಮೀಣ ಭಾಗಗಳಲ್ಲಿ ಬೆಳಗ್ಗೆ ಮತ್ತು ರಾತ್ರಿಯ ವೇಳೆ ಚಳಿಯ ಅನುಭವ ಹೆಚ್ಚಾಗಿದೆ. ಹಗಲಿನಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದೆ.

ಆರೋಗ್ಯದಲ್ಲಿ ಏರುಪೇರು, ವೈರಲ್ ಜ್ವರ ವ್ಯಾಪಕ

ಉರಿ ಬಿಸಿಲು, ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಶೀತ, ಕೆಮ್ಮು, ವೈರಲ್ ಜ್ವರ, ಅಸ್ತಮಾ ಸೇರಿದಂತೆ ಚರ್ಮದ ಕಾಯಿಲೆಗಳ ಪ್ರಮಾಣದಲ್ಲಿ ಏರಿಕೆಯಾಗಿದೆ. ವೈದ್ಯರ ಬಳಿ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಜನರ ಆರೋಗ್ಯ ಕಾಳಜಿಯ ಕುರಿತು ಎಚ್ಚರಿಕೆ ವಹಿಸಬೇಕು. 60 ವರ್ಷ ದಾಟಿದವರು ಹಾಗೂ ಮಕ್ಕಳಲ್ಲಿ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯ ಇಲಾಖೆ ಕೂಡಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಮಾಹಿತಿ ನೀಡುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!