ಹಿಂದಿ ಕಲಿಯುವುದು ನನ್ನ ಹಕ್ಕು: ತಮಿಳುನಾಡಿನಲ್ಲಿ ಅದು ಸಾಧ್ಯವಾಗಲಿಲ್ಲ; ಮುರುಗನ್

Picture of Savistara

Savistara

Bureau Report

ವಾರಾಣಸಿ (ಉತ್ತರ ಪ್ರದೇಶ): ‘ಹಿಂದಿ ಭಾಷೆ ಕಲಿಯುವುದು ನನ್ನಹಕ್ಕು. ಆದರೆ, ತಮಿಳುನಾಡು ರಾಜಕೀಯದಿಂದಾಗಿ ನನಗೆ ಹಿಂದಿ ಕಲಿಕೆ ಸಾಧ್ಯವಾಗಲಿಲ್ಲ’ ಎಂದು ಕೇಂದ್ರ ಪ್ರಸಾರ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಹೇಳಿದ್ದಾರೆ.

ಕಾಶಿ ತಮಿಳು ಸಂಗಮ 4.0 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಆದರೆ, ನಮ್ಮ ತಮಿಳುನಾಡಿನ ರಾಜಕೀಯದಿಂದಾಗಿ ನನಗೆ ಹಿಂದಿ ಕಲಿಯಲು ಸಾಧ್ಯವಾಗಲಿಲ್ಲ’ ಎಂದು ತಿಳಿಸಿದ್ದಾರೆ.’ನಾನು ದೆಹಲಿಗೆ ಬಂದ ನಂತರವಷ್ಟೇ ಹಿಂದಿ ಮಾತನಾಡುವುದನ್ನು ಕಲಿಯುತ್ತಿದ್ದೇನೆ. ಮಾತನಾಡುವಾಗ ಯಾವುದೇ ತಪ್ಪು ಇದ್ದರೆ ದಯವಿಟ್ಟು ನನ್ನನ್ನು ಕ್ಷಮಿಸಿ’ ಎಂದು ಹೇಳಿದ್ದಾರೆ.ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಶಿಫಾರಸು ಮಾಡಿದ ತ್ರಿಭಾಷಾ ಸೂತ್ರವು ವಿವಾದದ ಕೇಂದ್ರಬಿಂದುವಾಗಿದೆ. ತಮಿಳುನಾಡು ಸರ್ಕಾರ ಇದನ್ನು ಜಾರಿಗೆ ತರಲು ನಿರಾಕರಿಸಿದ್ದು, ಕೇಂದ್ರ ಸರ್ಕಾರ ಹಿಂದಿ ಹೇರುತ್ತಿದೆ ಎಂದು ಆರೋಪಿಸಿದೆ. ಆದಾಗ್ಯೂ, ಕೇಂದ್ರವು ತಮಿಳುನಾಡು ಸರ್ಕಾರದ ಆರೋಪವನ್ನು ನಿರಾಕರಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!