ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

Picture of Savistara

Savistara

Bureau Report

ಕೆಂಪುಕಲ್ಲು ಗಣಿಗಾರಿಕೆಗೆ 59, ಮರಳುಗಾರಿಕೆಗೆ 42 ಪರವಾನಿಗೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ.ಜಿಲ್ಲೆಯಲ್ಲಿಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದ್ದು, 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಈಗಾಗಲೇ 19 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇನ್ನೂ 42 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಮುಂದಿನ ಐದು ವರ್ಷ ಮರಳುಗಾರಿಕೆಗೆ ಸಮಸ್ಯೆಯಾಗುವ ಸಾಧ್ಯತೆ ಇಲ್ಲ ಎಂದು ಹೇಳಿದರು.

Advertisement

25ಕೆಂಪು ಕಲ್ಲಿನ ದರ 40ಕ್ಕಿಂತ ಕೆಳಗಿಳಿಸುವ ಉದ್ದೇಶ:

Advertisement

ಜಿಲ್ಲೆಯಲ್ಲಿ ಈ ಹಿಂದೆ 30-35 ರೂ.ಗೆ ದೊರೆಯುತ್ತಿದ್ದ ಕೆಂಪುಕಲ್ಲು ಬಳಿಕ 65 ರೂ.ಗೆ ಏರಿಕೆಯಾಗಿತ್ತು. ಈ ಸಮಸ್ಯೆ ಬಗೆಹರಿಸಿ, ಕೆಂಪು ಕಲ್ಲು ತೆಗೆಯಲು ಇದುವರೆಗೆ 59 ಪರ್ಮಿಟ್‌ಗಳನ್ನು ನೀಡಲಾಗಿದೆ. ಇನ್ನೂ 12 ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ವಿಲೇವಾರಿ ಮಾಡಲಾಗುವುದು.ಸದ್ಯ ಕಲ್ಲಿನ ದರ 45 ರೂ.ಗೆ ಇಳಿಕೆಯಾಗಿದೆ. ಮುಂದೆ ಇದನ್ನು 40 ರೂ.ಗಿಂತ ಕೆಳಗೆ ಇಳಿಸುವ ಉದ್ದೇಶ ಇದೆ ಎಂದರು.ಕೆಂಪುಕಲ್ಲು ತೆಗೆಯಲು ಅರ್ಜಿ ಆಹ್ವಾನಿಸಲಾಗಿದ್ದು, 60 ಅರ್ಜಿಗಳು ಮಾತ್ರ ಬಂದಿದೆ. ಆಸಕ್ತರು ಅರ್ಜಿ ಹಾಕಿದರೆ ಪರ್ಮಿಟ್ ನೀಡಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

Advertisement

ರಸ್ತೆ ಗುಂಡಿ ಮುಚ್ಚಲು ಕ್ರಮ:

Advertisement

ಜಿಲ್ಲೆಯ ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ರಸ್ತೆಗಳನ್ನು ಗುರುತಿಸಲಾಗಿದೆ.ಮೊದಲ ಹಂತದಲ್ಲಿ ಏಳು ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Advertisement

ವಾರದಲ್ಲೊಂದು ದಿನ ಹಳೆ ಕಚೇರಿಯಲ್ಲಿ ಕರ್ತವ್ಯ:

Advertisement

ನಗರ ಹೊರವಲಯದ ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಾರ್ಯ ನಿರ್ವಹಿಸುತ್ತಿದ್ದರೂ ವಾರದಲ್ಲೊಂದು ದಿನ ತಾನು ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಜಿಲ್ಲಾಧಿಕಾರಿ ದರ್ಶನ್ ಹೇಳಿದರು. ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್‌ಎಎಫ್‌ ಪಡೆ ಕಚೇರಿಗೆ ಸ್ಥಳಾವಕಾಶ ನೀಡಲಾಗಿದೆ.ಉಳಿದಂತೆ ರಾಷ್ಟ್ರೀಯ ಹೆದ್ದಾರಿ, ಕಾರ್ಮಿಕ ಇಲಾಖೆಗೆ ಸ್ಥಳಾವಕಾಶ ನೀಡುವ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ದ.ಕ ಜಿಪಂ ಸಿಇಒ ನರ್ವಾಡೆ ವಿನಾಯಕ ಕರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ.ಉಪಸ್ಥಿತರಿದ್ದರು.

News Updates

ಐವರ್ನಾಡು – ನನ್ಯಡ್ಕ ಎಸ್.ಸಿ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕೆ ಅನುದಾನ ಮಂಜೂರಾತಿಗೆ ಮನವಿ: ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಒತ್ತಾಯ | ಸರ್ವೆ ಕಾರ್ಯ ಪೂರ್ಣ, ಶೀಘ್ರ ಅನುದಾನ ಬಿಡುಗಡೆಗೊಳಿಸುವಂತೆ ಕೋರಿಕೆ

[t4b-ticker]
error: Content is protected !!