ಹೈದರಾಬಾದ್: ತಾಂತ್ರಿಕ ತೊಂದರೆ; 40 ವಿಮಾನಗಳ ಸಂಚಾರ ರದ್ದು

Picture of Savistara

Savistara

Bureau Report

ಹೈದರಾಬಾದ್‌: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಆರ್‌ಜಿಐಎ) ವಿಮಾನಯಾನ ಸಂಬಂಧಿತ ತಂತ್ರಜ್ಞಾನ ಮತ್ತು ಕಾರ್ಯಾಚರಣೆಯ ತೊಡಕಿನಿಂದಾಗಿ ದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆಗೆ ತೆರಳಬೇಕಿದ್ದ 40ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಈ ತೊಡಕಿನಿಂದ ಇಂಡಿಗೊ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೆಲವು ವಿಮಾನಗಳ ಸಂಚಾರ ವಿಳಂಬವಾಗಿದ್ದರೆ, ಇನ್ನೂ ಕೆಲವವನ್ನು ರದ್ದುಗೊಳಿಸಲಾಗಿದೆ. ಆರ್‌ಜಿಐಎಗೆ ಬರಬೇಕಿದ್ದ 18 ವಿಮಾನಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ವಿಮಾನಗಳ ಸಂಚಾರ ರದ್ದಾಗಿದ್ದರಿಂದ ಸಿಟ್ಟಿಗೆದ್ದ ಪ್ರಯಾಣಿಕರು ಇಂಡಿಗೊ ಕಂಪನಿಯ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಸಿಬ್ಬಂದಿ ಮತ್ತು ಪ್ರಯಾಣಿಕರ ನಡುವೆ ಜಟಾಪಟಿ ನಡೆದಿರುವ ವಿಡಿಯೊಗಳು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.ವಿಮಾನ ನಿಲ್ದಾಣದ ಇತರೆ ಕಾರ್ಯಾಚರಣೆಗಳು ಯಾಥಾಸ್ಥಿತಿಯಲ್ಲಿವೆ. ಇಂಡಿಗೊ ವಿಮಾನಗಳ ಸ್ಥಿತಿ ಮತ್ತು ಇತರೆ ಮಾಹಿತಿಗಾಗಿ ಪ್ರಯಾಣಿಕರು ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಆರ್‌ಜಿಐಎ ತನ್ನ ‘ಎಕ್ಸ್’ನಲ್ಲಿ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!