ಮಲೆನಾಡಿನ ಅಡಿಕೆ ಬೆಳೆಗಾರರ ಸಂಕಷ್ಟ | ಸಂಸತ್ತಿನಲ್ಲಿ ಸಂಸದ ಬಿ ವೈ ರಾಘವೇಂದ್ರ ಕೇಂದ್ರ ಸರ್ಕಾರದೊಂದಿಗೆ ಮನವಿ

Picture of Savistara

Savistara

Bureau Report

ಇಂದು ಸಂಸತ್ತಿನಲ್ಲಿ ಶೂನ್ಯ ಕಾಲ ಉಲ್ಲೇಖದ ಮಲೆನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ರೈತರು ಎದುರಿಸುತ್ತಿರುವ ಗಂಭೀರ ಸಂಕಷ್ಟವನ್ನು ಸಂಸದ ಬಿ ವೈ ರಾಘವೇಂದ್ರ ಪ್ರಸ್ತಾಪಿಸಿದರು.

ಹಳದಿ ಎಲೆ ರೋಗ (YLD) ಹಾಗೂ ಎಲೆ ಚುಕ್ಕೆ ರೋಗ (LSD) ಎಂಬ ಭೀಕರ ರೋಗಗಳು, ಜೊತೆಗೆ ಸತತವಾಗಿ ನಾಲ್ಕು ತಿಂಗಳು ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಲ್ಲಿ ಭಾರೀ ನಷ್ಟವಾಗಿದೆ. ಪರಿಣಾಮವಾಗಿ, ಅನೇಕ ರೈತರು ಈ ವರ್ಷ ನಿರೀಕ್ಷಿಸಿದ್ದ ಫಸಲಿನ ಕೇವಲ ನಾಲ್ಕನೇ ಭಾಗವಷ್ಟೇ ದೊರೆಯುವ ಸ್ಥಿತಿ ಎದುರಿಸುತ್ತಿದ್ದಾರೆ.

ಅದೇ ವೇಳೆ, ಬೆಳೆ ವಿಮೆ ಯೋಜನೆಯಾದ WBCIS ಅನುಷ್ಠಾನದಲ್ಲಿ ಕಂಡುಬರುವ ಗಂಭೀರ ತೊಂದರೆಗಳನ್ನು ಎಂದು ಬಿ ವೈ ರಾಘವೇಂದ್ರ ಉಲ್ಲೇಖಿಸಿದರು.

ಅನೇಕ ಮಳೆಮಾಪನ ಕೇಂದ್ರಗಳು ಕಾರ್ಯನಿರ್ವಹಿಸದೇ ಇರುವುದು, ಮೂರು ವರ್ಷಕ್ಕೊಮ್ಮೆ ಮಾತ್ರ ಪರಿಷ್ಕಾರಗೊಳ್ಳುವ ತಾಂತ್ರಿಕ ಮಾನದಂಡಗಳು, ಮತ್ತು 20 ರಿಂದ 45 ಕಿಮೀ ದೂರದಲ್ಲಿರುವ ಬ್ಯಾಕಪ್ ಮಳೆಮಾಪನ ಕೇಂದ್ರಗಳ ತಡವಾದ ಅಧಿಸೂಚನೆ–ಇವುಗಳ ಪರಿಣಾಮವಾಗಿ ಹಲವಾರು ಅರ್ಹ ರೈತರು ಯೋಗ್ಯ ಪರಿಹಾರವನ್ನೇ ಪಡೆಯದ ಸ್ಥಿತಿ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ, ಸಮೀಪದ ಹಾಗೂ ಹವಾಮಾನಕ್ಕೆ ತಕ್ಕಂತೆ ನಿಖರ ಮಾಹಿತಿಯನ್ನು ಹೊಂದಿರುವ ಕೇಂದ್ರಗಳ ಆಧಾರದ ಮೇಲೆ ರೈತರಿಗೆ 2024–25ರ ಪರಿಹಾರವನ್ನು ಮರು ಲೆಕ್ಕ ಹಾಕುವಂತೆ, ಮಳೆ SMS ಸೇವೆಯನ್ನು ಪುನರ್‌ಸ್ಥಾಪಿಸುವಂತೆ, ರೋಗ ನಿಯಂತ್ರಣಕ್ಕೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಹಾಗೂ ಅಡಿಕೆ ಬೆಳೆ ನಷ್ಟಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ ನೀಡುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರವನ್ನು ಬಿ ವೈ ರಾಘವೇಂದ್ರ ಮನವಿ ಮಾಡಿದರು.

[t4b-ticker]
error: Content is protected !!