ದ್ವೇಷಭಾಷಣ ಮಾಡಿದ್ರೆ ಇನ್ನು 3 ವರ್ಷ ಜೈಲು?

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯಿದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ(ಹೋರಾಟ, ತಡೆಯುವಿಕೆ) ವಿಧೇಯಕ 2025’ಕ್ಕೆ ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಜೂನ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿದ್ದು, ಅಂತಿಮ ವಿಧೇಯಕವು ಗುರುವಾರ ಅಂದರೆ ಇಂದು ಮಂಡನೆಯಾಗಲಿದೆ. ಅನುಮೋದನೆ ನೀಡಿದ ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸುವ ಸಾಧ್ಯತೆಯಿದೆ. ಈ ಕಾಯ್ದೆಯಡಿ ಧಾರ್ಮಿಕ, ಜನಾಂಗೀಯ, ಜಾತಿ ಅಥ ವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡ ಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ರು. ದಂಡದ ಜತೆಗೆ ಶಿಕ್ಷೆ ವಿಧಿಸಬಹುದು ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!