ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್ಸಿ-ಎಸ್ಟಿ ಕಾಯ್ದೆ ರಕ್ಷಣೆ ಸಿಗುವುದಿಲ್ಲ; ಅಲಹಾಬಾದ್ ಹೈಕೋರ್ಟ್ ತೀರ್ಪು

Picture of Savistara

Savistara

Bureau Report

ಜಾತಿ ವ್ಯವಸ್ಥೆಗೆ ಮಾನ್ಯತೆ ಇಲ್ಲದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ರಕ್ಷಣಾ ನಿಯಮಗಳನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಲಕ್ಕೋ, ಡಿ.2 : ಜಾತಿ ವ್ಯವಸ್ಥೆಗೆ ಮಾನ್ಯತೆ ಇಲ್ಲದ ಕ್ರಿಶ್ಚಿಯನ್ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ರಕ್ಷಣಾ ನಿಯಮಗಳನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಪರಿಶಿಷ್ಟ ಜಾತಿಗೆ(ಎಸ್‌ಸಿ) ಸೇರಿದ ಜಿತೇಂದ್ರ ಕುಮಾ‌ರ್ ಸಾಕ್ಷಿ ಮೇಲೆ ಹಿಂದೂ ದೇವರನ್ನು ಅವಹೇಳನ ಮಾಡಿದ ಕಾರಣ ನೀಡಿ ವಿವಿಧ ಸೆಕ್ಷನ್ ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಅದನ್ನು ಪ್ರಶ್ನಿಸಿ ಜಿತೇಂದ್ರ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಪ್ರವೀಣ್ ಕುಮಾರ್ ಗಿರಿ ನೇತೃತ್ವದ ಏಕದಸ್ಯ ಪೀಠ ವಜಾಗೊಳಿಸಿ, ಈ ಮಹತ್ವದ ತೀರ್ಪು ನೀಡಿದೆ.ತಾನು ಎಸ್‌ಸಿ ಸಮುದಾಯಕ್ಕೆ ಸೇರಿದ್ದು, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ನೀಡುವಂತೆ ಜಿತೇಂದ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ಆಧಾರಿತ ವ್ಯವಸ್ಥೆ ಇಲ್ಲ. ಆದ್ದರಿಂದ ಪರಿಶಿಷ್ಟ ಜಾತಿಯಾಗಿದ್ದರೂ ಆ ಧರ್ಮಕ್ಕೆ ಮತಾಂತರಗೊಂಡ ನಂತರ, ಹಿಂದಿದ್ದ ಜಾತಿ ಪ್ರಮಾಣಪತ್ರ ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪಿನಲ್ಲಿ ವಿವರಿಸಿದೆ.

‘ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ರಕ್ಷಿಸುವುದು ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆ ಉದ್ದೇಶವಾಗಿದೆ. ಹಾಗಾಗಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ ವ್ಯಕ್ತಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ತಕ್ಷಣ ತಮ್ಮ ಹಿಂದಿದ್ದ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ. anan ಈ ಕಾಯ್ದೆಯಲ್ಲಿನ ರಕ್ಷಣಾತ್ಮಕ ನಿಬಂಧನೆಗಳನ್ನು ವಿಸ್ತರಿಸಲಾಗುವುದಿಲ್ಲ ಎಂದು ಪೀಠ ತಿಳಿಸಿದೆ. ಅರ್ಜಿದಾರರ ಧರ್ಮದ ಕುರಿತು ಮೂರು ತಿಂಗಳೊಳಗೆ ತನಿಖೆ ನಡೆಸಬೇಕು. ಒಂದೊಮ್ಮೆ ಧರ್ಮದ ವಿಚಾರವಾಗಿ ನಕಲಿ ದಾಖಲೆ ಸೃಷ್ಟಿಸಿರುವುದು ಸಾಬೀತಾದರೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ಮೂಲಕ ಭವಿಷ್ಯದಲ್ಲಿ ಯಾರೂ ನ್ಯಾಯಾಲಯಕ್ಕೆ ಇಂಥ ಪ್ರಮಾಣಪತ್ರಗಳನ್ನು ಸಲ್ಲಿಸಬಾರದು ಎಂದು ನ್ಯಾಯಾಲಯವು ಇದೇ ವೇಳೆ ಮಹಾರಾಜ್‌ಗಂಜ್‌ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!