ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Picture of Savistara

Savistara

Bureau Report

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.

ಅದರಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ಸಹಾಯಕ ಕಮಿಷನ‌ರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ. ಲಭ್ಯ ಮಾಹಿತಿಯಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.8 ರಂದು ಪುತ್ತೂರು ಎಸಿ ಮುಂದೆ ಹಾಜರಾಗಲು ನೋಟಿಸ್‌ ಜಾರಿ ಮಾಡಿದೆ. ಈಗ ನೀಡಿರುವ ನೋಟೀಸ್ ನಲ್ಲಿ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿವಾದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!