ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ತಾಯಿ ಮಗು ಡಿಸ್ಟಾರ್ಜ್ ವೇಳೆಯೇ `ಜನನ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ

Picture of Savistara

Savistara

Bureau Report

ಬೆಳೆ ಕಟಾವು ಪ್ರಯೋಗ ಹಾಗೂ ಜನನ-ಮರಣ ನೋಂದಣಿ ಕಾರ್ಯ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಬೆಳೆ ಕಟಾವು ಪ್ರಯೋಗ ಹಾಗೂ ಜನನ-ಮರಣ ನೋಂದಣಿ ಕಾರ್ಯ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ “ಕೃಷಿ ಅಂಕಿ ಅಂಶಗಳ ಎರಡನೇ ತ್ರೈಮಾಸಿಕ ಸಭೆ” ಹಾಗೂ “ನಾಗರಿಕ ನೋಂದಣಿ ಪದ್ದತಿ” ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಯಕ್ಕೆ ಸರಿಯಾಗಿ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿ ರೈತರಿಗೆ ಸಮಸ್ಯೆ ಅಥವಾ ನಷ್ಟ ಉಂಟಾದರೆ ಸಂಬಂಧಪಟ್ಟವರಿಂದಲೇ ನಷ್ಟ ಭರಿಸಲು ಕ್ರಮ ಕೈಗೊಳ್ಳಲಾಗುವುದು. ನಿಯೋಜಿಸಿದ ಅಧಿಕಾರಿಗಳೇ ಖುದ್ದಾಗಿ ಜಮೀನುಗಳಿಗೆ ಭೇಟಿ ನೀಡಿ, ಬೆಳೆ ಕಟಾವು ಪ್ರಯೋಗ ನಡೆಸಬೇಕು. ಈ ಹಿಂದೆ ಬೆಳೆ ಕಟಾವು ಪ್ರಯೋಗದಲ್ಲಿ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.ಚಳ್ಳಕೆರೆ ತಾಲ್ಲೂಕಿನಲ್ಲಿ ಈ ಹಿಂದೆ ಅಕ್ರಮವಾಗಿ ಬೆಳೆ ಪರಿಹಾರ ಧನವನ್ನು ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ದೂರು ದಾಖಲಾಗಿದೆ. ಪ್ರಕರಣದ ತನಿಖೆಗೆ ಸಮಿತಿ ನೇಮಿಸಲಾಗಿದೆ. ವರದಿ ಆಧರಿಸಿ ಶೀಘ್ರದಲ್ಲೇ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಆಗಲಿದೆ. ತಹಶೀಲ್ದಾರ್ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಬೆಳೆ ಕಟಾವು ಪ್ರಯೋಗದ ಕುರಿತು ತಮ್ಮ ಹಂತದಲ್ಲಿ ಸಮನ್ವಯ ಸಭೆಯನ್ನು ನಡೆಸಬೇಕು. ಸಭೆ ನಡೆಸದೆ ಲೋಪ ಉಂಟಾದರೆ ಅಂತಹ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

[t4b-ticker]
error: Content is protected !!