ಗೋವಾ : ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ : 23 ಮಂದಿ ಸಜೀವ ದಹನ

Picture of Savistara

Savistara

Bureau Report

ಪಣಜಿ: ಗೋವಾದ ಬಿರ್ಚ್ ಬೈ ರೆಮೆಯೊ ಲೇನ್‌ ಕ್ಲಬ್ ನಲ್ಲಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 23 ಮಂದಿ ಸಜೀವ ದಹನವಾಗಿದ್ದಾರೆ.

ಡ್ಯಾನ್ಸ್‌ ಕಾರ್ಯಕ್ರಮ ನಡೆಯುತ್ತಿದ್ದಾಗ ಮೇಲ್ಬಾಗದಿಂದ ಬೆಂಕಿಯುಂಡೆ ಬೀಳುವ ದೃಶ್ಯ ವಿಡಿಯೋ ವೈರಲ್ ಆಗಿದೆ. ಸುಟ್ಟುಗಾಯಗಳು ಮತ್ತು ಉಸಿರುಗಟ್ಟಿ 23 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ದೃಢಪಡಿಸಿದ್ದಾರೆ.

ಉತ್ತರ ಗೋವಾದ ಅರ್ಪೋರಾ ಪ್ರದೇಶದಲ್ಲಿದ್ದ ಕ್ಲಬ್‌ನಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತನಿಖೆ ಕೈಗೊಳ್ಳುವಂತೆ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಆದೇಶಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಪೊಲೀಸರು ಎಲ್ಲ ಮೃತದೇಹಗಳನ್ನು ಪತ್ತೆ ಮಾಡಿದ್ದು, ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಗೋವಾದ ಎಲ್ಲ ಸಂಸ್ಥೆಗಳಲ್ಲಿ ಸುರಕ್ಷತಾ ಪರಿಶೋಧನೆ ನಡೆಸುವ ತುರ್ತ ಅಗತ್ಯತೆಯನ್ನು ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.ದುರಂತವನ್ನು ತೀರಾ ಕಳವಳಕಾರಿ ಎಂದು ಬಣ್ಣಿಸಿರುವ ಬಿಜೆಪಿ ಶಾಸಕ ಮೈಕೆಲ್ ಲೋಬೊ ಅವರು, “ಗೋವಾದ ಎಲ್ಲ ಕ್ಲಬ್‌ಗಳಲ್ಲಿ ಸುರಕ್ಷಾ ಪರಿಶೋಧನೆ ಕೈಗೊಳ್ಳುವ ಅಗತ್ಯತೆ ಇದೆ” ಎಂದು ಹೇಳಿದ್ದಾರೆ.“ಈ ಘಟನೆಯಿಂದ ತೀರಾ ಆಘಾತವಾಗಿದೆ. ಮೂವರು ಮಹಿಳೆಯರು ಸೇರಿದಂತೆ 23 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಪೈಕಿ ಕೆಲವರು ಪ್ರವಾಸಿಗಳಾದರೆ ಬಹುತೇಕ ಮಂದಿ ರೆಸ್ಟೋರೆಂಟ್‌ನ ಬೇಸ್‌ಮೆಂಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ಥಳೀಯ ಉದ್ಯೋಗಿಗಳು” ಎಂದು ಅವರು ವಿವರ ನೀಡಿದ್ದಾರೆ.

ಗೋವಾ ಅತ್ಯಂತ ಸುರಕ್ಷಿತ ತಾಣ ಎನ್ನುವುದು ಪ್ರವಾಸಿಗಳ ಭಾವನೆ. ಆದರೆ ಈ ಅಗ್ನಿ ಆಕಸ್ಮಿಕ ತೀರಾ ಕಳವಳಕಾರಿ. ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಪ್ರವಾಸಿಗಳು ಮತ್ತು ಕಾರ್ಮಿಕರ ಸುರಕ್ಷತೆ ತೀರಾ ಮಹತ್ವದ್ದು. ಬಹುತೇಕ ಮಂದಿ ಬೇಸ್‌ಮೆಂಟ್‌ನಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!