ಜೈಲು ಶಿಕ್ಷೆ: ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್‌ ಭಟ್‌ ಅರ್ಜಿ ವಜಾ

Picture of Savistara

Savistara

Bureau Report

ನವದೆಹಲಿ: 1996ರಲ್ಲಿ ನಡೆದ ಮಾದಕವಸ್ತು ವಶ ಪ್ರಕರಣದಲ್ಲಿತಮಗೆ ವಿಧಿಸಲಾಗಿರುವ 20 ವರ್ಷಗಳ ಜೈಲು ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

‘ಈ ಅರ್ಜಿಯನ್ನು ಪರಿಗಣಿಸಲು ನಮಗೆ ಒಲವು ಇಲ್ಲ’ ಎಂದು ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ವಿಜಯ್ ಬಿಷ್ಟೋಯಿ ಅವರ ಪೀಠ ಹೇಳಿದೆ.ಗುಜರಾತ್‌ನ ಬನಾಸಕಾಂಠಾ ಜಿಲ್ಲೆಯ ಪಾಲನ್ನುರ ಪಟ್ಟಣದ ಸೆಷನ್ಸ್ ನ್ಯಾಯಾಲಯವು ಭಟ್ ಅವರಿಗೆ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.ಭಟ್ ಅವರು 1996ರಲ್ಲಿ ಬನಾಸಕಾಂಠಾ ಜಿಲ್ಲೆಯ ಎಸ್‌ಪಿ ಆಗಿದ್ದಾಗ ಮಾದಕವಸ್ತುಗಳ ಪ್ರಕರಣವೊಂದರಲ್ಲಿ ವಕೀಲರೊಬ್ಬರನ್ನು ಸಿಲುಕಿಸುವ ಕೃತ್ಯ ಎಸಗಿರುವುದು ಸಾಬೀತಾಗಿತ್ತು. ಅವರನ್ನು ಸಿಐಡಿಯು 2018ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅಂದಿನಿಂದ ಜೈಲಿನಲ್ಲಿ ಇದ್ದಾರೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!