ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ

Picture of Savistara

Savistara

Bureau Report

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ಬಿ. ವೈ ರಾಘವೇಂದ್ರರವರು ಅವರ ಕಚೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ವಿವರವಾಗಿ ಚರ್ಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ವಿಶೇಷವಾಗಿ ಕೊಲ್ಲೂರು ಕಾರಿಡಾರ್ ಅಭಿವೃದ್ಧಿ ಯೋಜನೆ ಹಾಗೂ ಶಿವಮೊಗ್ಗದ ಇಸ್ಲಾಪುರದಲ್ಲಿ ವಿಶ್ವದ ಅತ್ಯುನ್ನತ ಶ್ರೀ ಬಾಲ ಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅಗತ್ಯವಿರುವ ಹಣಕಾಸು ಸಹಾಯ ಹಾಗು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದ ನೆರವು ಒದಗಿಸಬೇಕೆಂದು ವಿನಂತಿಸಲಾಯಿತು.ಈ ಬೇಡಿಕೆಗಳನ್ನು ಗಮನದಿಂದ ಆಲಿಸಿದ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಗತ್ಯ ಸಹಕಾರದ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!