ಶಬರಿಮಲೆ ಯಾತ್ರೆ: ಅರಣ್ಯ ಮಾರ್ಗ ಬಳಕೆ ಹೆಚ್ಚಳ

Picture of Savistara

Savistara

Bureau Report

ಪತ್ತನಂತಿಟ್ಟ (ಕೇರಳ): ‘ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ(ಟಿಡಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದರು.

‘ಪ್ರಸ್ತುತ ಯಾತ್ರೆಯ ಅವಧಿಯಲ್ಲಿ ಈವರೆಗೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರು ವಿವಿಧ ಅರಣ್ಯ ಮಾರ್ಗಗಳ ಮೂಲಕ ಸನ್ನಿಧಾನಕ್ಕೆ ಬಂದಿದ್ದಾರೆ’ ಎಂದು ಅವರು ಹೇಳಿದರು.“ಅಳುತಕಡವು-ಪಂಪಾ ಮಾರ್ಗದಿಂದ ಪ್ರತಿದಿನ 1,500 ರಿಂದ 2000ರವರೆಗೆ ಒಟ್ಟು 37,059 ಭಕ್ತರು ಹಾಗೂ ಸತ್ರಂ ಮಾರ್ಗದಿಂದ ನಿತ್ಯ 4000ದಿಂದ 5000ದವರೆಗೆ ಒಟ್ಟು 64,776 ಮಂದಿ ಭಕ್ತರು ಬಂದಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.’ಮುಂದಿನ ದಿನಗಳಲ್ಲಿ ಅರಣ್ಯ ಮಾರ್ಗದಿಂದ ಸನ್ನಿಧಾನಕ್ಕೆ ಬರುವ ಭಕ್ತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ’ ಎಂದು ಅವರು ಹೇಳಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!