ವದಂತಿಗಳಿಗೆ ತೆರೆ: ಮೆಸ್ಸಿ ಕಾರ್ಯಕ್ರಮಕ್ಕೆ ಆಗಮಿಸಿದ ಸುನಿಲ್ ಚೆಟ್ರಿ

Picture of Savistara

Savistara

Bureau Report

ಮುಂಬೈ: ಫುಟ್‌ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಅವರ ಮುಂಬೈ ಕಾರ್ಯಕ್ರಮಕ್ಕೆ ಭಾರತದ ಫುಟ್‌ಬಾಲ್ ತಾರೆ ಸುನಿಲ್ ಚೆಟ್ರಿ ಆಗಮಿಸಿದ್ದಾರೆ.

ಮೆಸ್ಸಿ ಅವರು ‘GOAT Tour of India’ ಪ್ರವಾಸದ ಭಾಗವಾಗಿ ಮೂರು ದಿನಗಳ ಕಾಲ ಭಾರತದಲ್ಲಿ ಇರಲಿದ್ದಾರೆ. ಮೊದಲ ದಿನ ಕೋಲ್ಕತ್ತ ಹಾಗೂ ಹೈದರಾಬಾದ್‌ಗೆ ಭೇಟಿ ನೀಡಿದ್ದರು. ಭಾನುವಾರ (ಡಿ.14) ಮುಂಬೈಗೆ ಆಗಮಿಸಿದ್ದಾರೆ.ವಾಂಖೆಡೆ ಮೈದಾನದಲ್ಲಿ ನಡೆದ ಪ್ರದರ್ಶನ ಪಂದ್ಯದಲ್ಲಿ ಮಿತ್ರಾ ಸ್ಟಾರ್ ತಂಡದ ಪರ ಆಟವಾಡಿರುವ ಸುನಿಲ್ ಚೆಟ್ರಿ, ಗೋಲು ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಪಂದ್ಯಕ್ಕೂ ಮುನ್ನ ಮೆಸ್ಸಿ ಜೊತೆ ಮೈದಾನದಲ್ಲಿ ಮಾತುಕತೆಯನ್ನು ಕೂಡ ನಡೆಸಿದ್ದಾರೆ.

ಭಾರತದ ಫುಟ್‌ಬಾಲ್ ವಲಯದಲ್ಲಿ ಜನಪ್ರಿಯರಾಗಿರುವ ಸುನಿಲ್ ಚೆಟ್ರಿ ಅವರು ಮೆಸ್ಸಿ ಕಾರ್ಯಕ್ರಮಕ್ಕೆ ಬಂದಿರುವುದಕ್ಕೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.ಲಿಯೊನೆಲ್ ಮೆಸ್ಸಿ ಅವರನ್ನು ಭೇಟಿಯಾಗಲು ಸುನಿಲ್ ಚೆಟ್ರಿ ನಿರಾಕರಿಸಿದ್ದಾರೆ ಎನ್ನುವ ವಂದತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!