ಗರ್ಭಕಂಠ ಕ್ಯಾನ್ಸ‌ರ್ ತಡೆಗಟ್ಟುವ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆ ನೀಡುವಂತೆ ಒತ್ತಾಯ

Picture of Savistara

Savistara

Bureau Report

ಸಚಿವ ದಿನೇಶ್ ಗುಂಡೂರಾವ್‌ಗೆ ರಾಜ್ಯ ಮಹಿಳಾ ಆಯೋಗ ಪತ್ರ

ಬೆಂಗಳೂರು : ರಾಜ್ಯದಲ್ಲಿರುವ ಮಹಿಳೆಯರಲ್ಲಿ ಗರ್ಭಕಂಠಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.ತಮಿಳುನಾಡು ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಗೆ ಕಾರಣವಾಗುವ ಎಚ್.ಪಿ.ವಿ. ವೈರಸ್ ತಡೆಗಟ್ಟಲು ಉಚಿತ ಲಸಿಕೆ ನೀಡುತ್ತಿದೆ. ರಾಜ್ಯದಲ್ಲೂ ಗರ್ಭಕಂಠ ಕ್ಯಾನ್ಸರ್ ಗೆ ಕಾರಣವಾಗುವ ವೈರಸ್ ತಡೆಗಟ್ಟುವಲ್ಲಿ ಮಹಿಳೆಯರಿಗೆ ಉಚಿತವಾಗಿ ಲಸಿಕೆಯನ್ನು ನೀಡಿ, ಅವರಲ್ಲಿ ಕ್ಯಾನ್ಸ‌ರ್ ತಡೆಗಟ್ಟಲು ನೆರವಾಗಬೇಕು ಎಂದು ಅವರು ಹೇಳಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!