ನೀರಾವರಿ ಯೋಜನೆಗಳ ಬಗ್ಗೆ ಬಿಜೆಪಿ ಮೌನವೇಕೆ?: ಡಿ.ಕೆ. ಶಿವಕುಮಾ‌ರ್

Picture of Savistara

Savistara

Bureau Report

ಬೆಳಗಾವಿ: “ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಚರ್ಚೆಗಾಗಿ ನಾವು ಅಧಿವೇಶನ ಕರೆದಿದ್ದೇವೆ. ಆದರೆ ಮಹದಾಯಿ, ಕೃಷ್ಣಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ಬಿಜೆಪಿ ನಾಯಕರು ಯಾಕೆ ಮಾತನಾಡುತ್ತಿಲ್ಲ?” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಜಿಎಸ್‌ಟಿ ಪರಿಷ್ಕರಣೆ ಮೂಲಕ ರಾಜ್ಯಕ್ಕೆ ವಾರ್ಷಿಕ 15 ಸಾವಿರ ಕೋಟಿ ರೂ. ಆದಾಯ ಕಡಿತಗೊಳಿಸಿದೆ. ಭದ್ರಾ ಯೋಜನೆಗೆ ಘೋಷಿಸಿದ 5300 ಕೋಟಿ ರೂ. ಅನುದಾನ ನೀಡಿಲ್ಲ,ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಹಾಗೆಯೇ ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಸಿದರು.”ಗ್ಯಾರಂಟಿ ಯೋಜನೆಗಳ ಜಾರಿಗೆ ನಾವು ಬದ್ಧರಿದ್ದೇವೆ. ಒಂದೆರಡು ತಿಂಗಳು ವಿಳಂಬವಾಗಬಹುದು ಅಷ್ಟೆ. ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿಗೆ ತರಲಿ,” ಎಂದು ಸವಾಲು ಹಾಕಿದರು.ದ್ವೇಷ ಭಾಷಣ ನಿಷೇಧ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿ ಅವರು, ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ ಎಂದರು.

ದೆಹಲಿಯಲ್ಲಿ ನಡೆದ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಅವರು, ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ನಮ್ಮ ಯಶಸ್ವಿ ಎಂದು ಹೇಳಿದರು.ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ ಎಂದರು.ಪ್ರಿಯಾಂಕಾ ಗಾಂಧಿಯವರ ಸಂದೇಶದಂತೆ ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.

[t4b-ticker]
error: Content is protected !!