ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸುಗಳ ನಿರಾಕರಣೆ; ಸಂಪುಟ ನಿರ್ಣಯ ಕೇಂದ್ರಕ್ಕೆ ಸಲ್ಲಿಕೆ : ಈಶ್ವರ್ ಖಂಡ್ರೆ

Picture of Savistara

Savistara

Bureau Report

ಬೆಳಗಾವಿ : ಡಾ.ಕಸ್ತೂರಿ ರಂಗನ್ ಸಮಿತಿಯ ವರದಿಯಶಿಫಾರಸುಗಳನ್ನು ನಿರಾಕರಿಸುವ ಹಾಗೂ ವರದಿಯನ್ನು ಆಧರಿಸಿ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಸಂಬಂಧ ಕೇಂದ್ರ ಸರಕಾರದ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸಚಿವರ ಸಂಪುಟದ ನಿರ್ಣಯವನ್ನು ಅನುಸರಿಸಿ, ರಾಜ್ಯ ಸರಕಾರದ ನಿಲುವನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್‌ನ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯ ಐವನ್ ಡಿ’ಸೋಜ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಾ.ಕಸ್ತೂರಿ ರಂಗನ್ ವರದಿಯು ಈವರೆಗೂ ಜಾರಿಯಾಗದೇ ಇರುವುದರಿಂದ ಮಲೆನಾಡು ಕರಾವಳಿ ಭಾಗದ ಜನರಿಗೆ ಯಾವುದೇ ತೊಂದರೆ ಇಲ್ಲ ಎಂದರು.ಡಾ.ಕಸ್ತೂರಿ ರಂಗನ್ ಸಮಿತಿಯ ವರದಿಯನ್ನಾಧರಿಸಿ, ಕೇಂದ್ರ ಸರಕಾರವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸರಕಾರದ ಸ್ಪಷ್ಟ ನಿಲುವನ್ನು ಕೇಂದ್ರ ಸರಕಾರಕ್ಕೆ ಸಂವಹನಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!