ಧರ್ಮಸ್ಥಳ ಬುರುಡೆ ಕೇಸ್ : ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ

Picture of Savistara

Savistara

Bureau Report

ಶಿವಮೊಗ್ಗ: ಧರ್ಮಸ್ಥಳ ಪ್ಯಡ್ಯಂತ್ರ ಪ್ರಕರಣದ ಪ್ರಮುಖಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ.ಸೆ.9ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದ.

ಅಲ್ಲದೇ ಚಿನ್ನಯ್ಯನಿಗೆ ಕಳೆದ ನ.24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನ ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀರು ಶೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಕೂಡ ಜಾಮೀನು ನೀಡಲು ಯಾರು ಮುಂದೆ ಬಾರದ ಕಾರಣ ಶಿವಮೊಗ್ಗ ಕಾರಾಗೃಹದಲ್ಲೇ ಚಿನ್ನಯ್ಯ ಇರಬೇಕಾಯಿತು. ಇಂದು ಚಿನ್ನಯ್ಯನಿಗೆಬಿಡುಗಡೆ ಭಾಗಿ ಸಿಕ್ಕಿದ್ದು ಬೆಳಗ್ಗೆ 8-30ರ ಸುಮಾರಿಗೆ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಇನ್ನೋವಾ ಕಾರಿನಲ್ಲಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಸೇರಿದಂತೆ ಐದು ಜನರು ಆಗಮಿಸಿ ಕಾರಾಗೃಹದೊಳಗೆ ಹೋದರು. ಕ್ಯಾಮೆರಾಗಳನ್ನು ನೋಡುತ್ತಿದ್ದಂತೆ ಚಿನ್ನಯ್ಯನ ಪತ್ನಿ ತಲೆಮೇಲೆ ಸೆರಗು ಮುಚ್ಚಿಕೊಂಡು ಜೈಲಿನೊಳಗೆ ಹೊರಟರು. ಜೈಲಿನಲ್ಲಿ ಬಿಡುಗಡೆ ಪ್ರಕ್ರಿಯೆಗಳನ್ನು ಮುಗಿಸಿ ಪತಿ ಚಿನ್ನಯ್ಯನನ್ನು ಕರೆದುಕೊಂಡು ಅವಸರದಿಂದಲೇ ಹೊರಟು ಹೋದರು.

ಶಿವಮೊಗ್ಗ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬಿಡುಗಡೆ ಪ್ರಕ್ರಿಯೆ ನಡೆಯಿತು. ಒಟ್ಟಿನಲ್ಲಿ ಜಾಮೀನು ಮಂಜೂರಾಗಿ 24 ದಿನಗಳ ಬಳಿಗೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!