ಕುಕ್ಕೆ ಕಿರುಷಷ್ಠಿ ಮಹೋತ್ಸವ ಆಮಂತ್ರಣ ಪತ್ರಿಕೆಯಲ್ಲಿ ಅನ್ಯಧರ್ಮಿಯರ ಹೆಸರು : ಹಿಂದೂ ಭಾವನೆಗೆ ಧಕ್ಕೆ – ವಿ.ಹಿಂ.ಪ ಕಿಡಿ

Picture of Savistara

Savistara

Bureau Report

ಕಡಬ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಅತಿಥಿ ಸ್ಥಾನದಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸಿರುವುದನ್ನು ವಿ.ಹಿಂ.ಪ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ರೈ ತೀವ್ರವಾಗಿ ಖಂಡಿಸಿದ್ದಾರೆ.

ಹಿಂದೂ ಧಾರ್ಮಿಕ ಕ್ಷೇತ್ರವಾಗಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯಕ್ರಮಗಳಿಗೆ ಪ್ರೋಟೋಕಾಲ್ ನೆಪದಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸುವುದು ಸಂಪ್ರದಾಯ ಹಾಗೂ ಹಿಂದೂ ಧಾರ್ಮಿಕ ಕಾಯ್ದೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನು ಕೂಡಲೇ ತಿದ್ದುಪಡಿ ಮಾಡಿ ಅನ್ಯಧರ್ಮಿಯರ ಹೆಸರನ್ನು ಆಮಂತ್ರಣ ಪತ್ರಿಕೆಯಿಂದ ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಹಿಂದೆ ಕೂಡ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇದೇ ರೀತಿಯ ಘಟನೆಗಳು ನಡೆದಿದ್ದು, ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗಿದೆ ಎಂದು ಪ್ರಮೋದ್ ರೈ ತಿಳಿಸಿದ್ದಾರೆ. ಹಿಂದೂ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶಕ್ಕೆ ನಿರ್ಬಂಧವಿದ್ದು, ಇಂತಹ ಆಹ್ವಾನಗಳು ಸಂಪ್ರದಾಯ ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರೋಟೋಕಾಲ್ ನೆಪದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸದ ಅಕಾಡೆಮಿಗಳ ಅನ್ಯಧರ್ಮಿಯರನ್ನು ಆಹ್ವಾನಿಸುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ತಿದ್ದುಪಡಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

[t4b-ticker]
error: Content is protected !!