ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ಆರಂಭ | ಸಾರ್ವಜನಿಕರಿಗೆ ನಿಮ್ಮ ಮ್ಯಾಪಿಂಗ್ ನೀವೇ ಮಾಡಿಕೊಳ್ಳಿ | ಇಲ್ಲಿದೆ ಫುಲ್ ಡೀಟೇಲ್ಸ್

Picture of Savistara

Savistara

Bureau Report

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2002ನೇ ಸಾಲಿನ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಈ ಬಗ್ಗೆ 2002ರ ನಂತರ ಮದುವೆಯಾಗಿ ಬಂದವರು ಅಥವಾ ಸ್ಥಳಾಂತರಗೊಂಡವರು ಹಾಗೂ ಹೊಸದಾಗಿ ಸೇರ್ಪಡೆಗೊಂಡವರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಬಿ.ಎಲ್.ಓ(ಬೂತ್ ಲೆವೆಲ್ ಆಫೀಸರ್) ಮುಖಾಂತರ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು.

ಮ್ಯಾಪಿಂಗ್ ಮಾಡಿಸಿಕೊಳ್ಳಲು ತಾವು ಈ ಹಿಂದೆ ವಾಸ್ತವ್ಯವಿದ್ದ ತಮ್ಮ ಹಿಂದಿನ ವಿಧಾನಸಭಾ ಕ್ಷೇತ್ರದ ನಂಬರ್, ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯನ್ನು, ಒಂದು ವೇಳೆ ತಮ್ಮ ಹೆಸರು 2002ರ ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ತಮ್ಮ ತಂದೆ-ತಾಯಿಯ ಅವರ ಕ್ರಮಸಂಖ್ಯೆ ಅಥವಾ ಅಜ್ಜ-ಅಜ್ಜಿಯ ಅವರ ಕ್ರಮ ಸಂಖ್ಯೆಯೊಂದಿಗೆ ಮಾಹಿತಿಯನ್ನು ಸಂಬಂಧಪಟ್ಟ ಬಿ.ಎಲ್.ಓ(ಬೂತ್ ಲೆವೆಲ್ ಆಫೀಸರ್) ರವರಲ್ಲಿ ನೀಡಿ ಮ್ಯಾಪಿಂಗ್ ಮಾಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತಮ್ಮ ತಮ್ಮ ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿಗಳ ಕಛೇರಿಯನ್ನು ಅಥವಾ ಬಿ.ಎಲ್.ಓಅವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!