ಸಂಸದ್ ಖೇಲ್ ಮಹೋತ್ಸವ-2025 ಹಾಗೂ ಸಮಾರೋಪ ಸಮಾರಂಭಕೇಂದ್ರ ಸರಕಾರದ ನಿರ್ದೇಶನದ ಅನುಸಾರ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಸದ್ ಖೇಲ್ ಮಹೋತ್ಸವ 2025ರ ಅಂಗವಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮವಾದ ಡಿ.25 ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಹೆಮ್ಮಾಡಿಯ ಜನತಾ ಪಿಯು ಕಾಲೇಜ್ ಮೈದಾನದಲ್ಲಿ ಈಗಾಗಲೇ ನೋಂದಾವಣಿಯಾಗಿರುವ ಪುರುಷರಿಗೆ ವಾಲಿಬಾಲ್ ಹಾಗೂ ಹಗ್ಗ-ಜಗ್ಗಾಟ ಮತ್ತು ಮಹಿಳೆಯರಿಗೆ ಥ್ರೋಬಾಲ್ ಹಾಗೂ ಹಗ್ಗ-ಜಗ್ಗಾಟ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಪಂದ್ಯಾಟಗಳು ಬೆಳಿಗ್ಗೆ 9.00 ಗಂಟೆಗೆ ಪ್ರಾರಂಭವಾಗಲಿದೆ. ಇದೇ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರು ದೇಶದ ಯುವ ಸಮೂಹ ಹಾಗೂ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಅದೇ ದಿನ ಸಂಸದ್ ಕ್ರೀಡಾ ಮಹೋತ್ಸವದ ಸಮಾರೋಪ ಸಮಾರಂಭವು ನೆರವೆರಲಿದೆ.ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನೋಂದಾಯಿಸಿಕೊಂಡಿರುವ ಕ್ರೀಡಾಪಟುಗಳು ಸಮಯಕ್ಕೆ ಸರಿಯಾಗಿ ಹಾಜರಾಗಿ ಕ್ರೀಡಾಕೂಟದಲ್ಲಿ ಭಾಗವಿಸುವಂತೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪಂದ್ಯಾವಳಿಯನ್ನು ವೀಕ್ಷಿಸಿ ಕ್ರೀಡಾಪಟುಗಳಿಗೆ ಹುರಿದುಂಬಿಸುವಂತೆ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸದ ಬಿವೈ ರಾಘವೇಂದ್ರ ನೇತೃತ್ವದಲ್ಲಿ ಸಂಸದ ಖೇಲ್ ಮಹೋತ್ಸವ 2025
Savistara
Bureau Report
[t4b-ticker]













































