ಕುಂದಾಪುರ : ಕೊರಗರ ಕಾಲೋನಿಯಲ್ಲಿ 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 14 ಮನೆಗಳ ಗೃಹಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ

Picture of Savistara

Savistara

Bureau Report

ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿನ ಕೊರಗರ ಕಾಲೋನಿಯಲ್ಲಿ

2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 14 ಮನೆಗಳ ಗೃಹಪೂಜೆ ಹಾಗೂ ಲೋಕಾರ್ಪಣೆಯನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಹಾಗೂ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್, ಸಂಸದ ರಾಘವೇಂದ್ರ ಬಿವೈ ಅವರ ಉಪಸ್ಥಿತಿಯಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ,

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕರು, ಪದಾಧಿಕಾರಿಗಳು, ದಾನಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!