ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಮಹೋತ್ಸವ ಸಂಪನ್ನ

Picture of Savistara

Savistara

Bureau Report

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿಯ ಕಾರ್ಯಕ್ರಮಗಳ ಧರ್ಮಸಮ್ಮೇಳನ ಸಭೆ ಹಾಗೂ ಸಮಾರೋಪ ಸಮಾರಂಭ ಡಿ.26 ರ ಸಂಜೆ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹಾಗೂ ಆರ್ಯ ಗುರು ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತೀ ಶ್ರೀಪಾದರುಆಶೀರ್ವಚನ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಅಧ್ಯಕ್ಷ ನಿಕೇತ್ ರಾಜ್ ಮೌರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಸುಜಾತ ಕಲ್ಲಾಜೆ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರಾಜಗುರು ದ್ವಾರಕನಾಥ್ ಗೂರೂಜಿ, ರವಿ ಶಂಕರ ಶೆಟ್ಟಿ, ಉದ್ಯಮಿ ಕಿರಣ್ ಬುಡ್ಲೆಗುತ್ತು, ನ್ಯಾಯವಾದಿ ವೆಂಕಪ್ಪ ಗೌಡ, ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿ ಕೋಶಾಧಿಕಾರಿ ಪದ್ಮರಾಜ್.ಆರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಮುಖ್ಯ ಅತಿಥಿಗಳಾಗಿದ್ದರು.

ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ, ಅಯ್ಯಪ್ಪ ಸುತಗುಂಡಿ, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಲೀಲಾ ಮನಮೋಹನ್, ಪ್ರವೀಣ್ ರೈ ಮರುವಂಜ, ಸೌಮ್ಯ ಭರತ್, ಅಜಿತ್ ಕುಮಾರ್, ಡಾ.ಬಿ.ರಘು, ಕಡಬ ತಾಲ್ಲೂಕು ಕೆ.ಡಿ.ಪಿ. ಸದಸ್ಯ ಶಿವರಾಮ ರೈ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಅಚ್ಚುತ ಆಲ್ಕಬೆ,ಪವನ್ ಎಂ.ಡಿ, ಸತೀಶ್ ಕೂಜುಗೋಡು, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್‌ ವೇದಿಕೆಯಲ್ಲಿದ್ದರು.ಉಪನ್ಯಾಸಕಿ ಶ್ರುತಿ ಅಶ್ವಥ್ ನಿರೂಪಿಸಿದರು. ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ, ದೇವಳದ ಸಿಬ್ಬಂದಿಗಳಾದ ಅಶೋಕ್‌ ಅತ್ಯಡ್ಕ, ಪವನ್ ಕುಮಾರ್ ಬನ, ದೇವಿಪ್ರಸಾದ್ ಸಹಕರಿಸಿದರು

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!