ಕುಡಿದು ಟೈಟಾದ್ರೆ ನಾವೇ ಮನೆಗೆ ಬಿಡ್ತವೆ ಎಂದ ಗೃಹಸಚಿವ ಪರಮೇಶ್ವರ್: ಖರ್ಚು ಉಳೀತು ಎಂದು ಕಾಲೆಳೆದ ನೆಟ್ಟಿಗರು

Picture of Savistara

Savistara

Bureau Report

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕುಡಿದು ಟೈಟಾದ್ರೆ ಅವರನ್ನು ಮನೆಗೂ ಬಿಡ್ತೀವಿ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದೆ.

ಹೊಸ ವರ್ಷ ಸಂಭ್ರಮಾಚರಣೆಗೆ ಕೇವಲ ಮೂರು ದಿನ ಬಾಕಿಯಿರುವಾಗ ಗೃಹಸಚಿವ ಡಾ ಜಿ ಪರಮೇಶ್ವ‌ರ್ ಕಮಿಷನ‌ರ್ ಕಚೇರಿಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಭದ್ರತಾ ವ್ಯವಸ್ಥೆ ಬಗ್ಗೆ ಸುದೀರ್ಘ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಸಚಿವರು ಸೂಚನೆ ನೀಡಿದ್ದಾರೆ. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಸಚಿವರು ಹೊಸ ವರ್ಷಾಚರಣೆ ವೇಳೆ ಕುಡಿದು ಓಡಾಡಲೂ ಸಾಧ್ಯವಾಗದ ಸ್ಥಿತಿಯಲ್ಲಿರುತ್ತಾರೆ. ಅಂತವರನ್ನು ಮನೆಗೆ ಬಿಡುವ ವ್ಯವಸ್ಥೆಯನ್ನೂ ಮಾಡುತ್ತೇವೆ. ಇದಕ್ಕಾಗಿ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದರು.

ಆದರೆ ಸಚಿವರ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ತಮಾಷೆ ಮಾಡಿದ್ದಾರೆ. ಗೃಹಸಚಿವರೇ ಓಪನ್ ಆಗಿ ಕುಡಿಯಲು ಪ್ರೋತ್ಸಾಹ ಕೊಟ್ಟಿದ್ದಾರೆ. ಅವರೇ ಮನೆಗೆ ಬಿಡ್ತಾರೆ ಎಂದರೆ ನಮಗೆ ಡ್ರಾಪ್ ಖರ್ಚೂ ಉಳೀತು ಎಂದು ಕೆಲವರು ತಮಾಷೆ ಮಾಡಿದ್ದಾರೆ. ಗೃಹ ಸಚಿವರೇನೋ ಜನರ ಮೇಲಿನ ಕಾಳಜಿಯಿಂದ ಹೀಗೆ ಹೇಳಿದರೆ ನೆಟ್ಟಿಗರು ಅದನ್ನೂ ತಮಾಷೆ ಮಾಡುತ್ತಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!