ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಸ್ ಮಂಡಳಿಗೆ ಮಾತ್ರ : ಕೃಷ್ಣಾಪುರ ಮಸೀದಿ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪು

Picture of Savistara

Savistara

Bureau Report

ಬೆಂಗಳೂರು , 8.30 : ವಕ್ಸ್ ವ್ಯವಸ್ಥಾಪನಾ ಸಮಿತಿಯಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಸ್ ಮಂಡಳಿಗೆ ಮಾತ್ರ ಇದೆಯೇ ಹೊರತು ಮಸೀದಿ ವ್ಯವಸ್ಥಾಪನಾ ಸಮಿತಿಗೆ ಅಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಕೃಷ್ಣಾಪುರದ ಮುಸ್ಲಿಮ್ ಜಮಾತ್ ನ ಬದಾರಿಯಾ ಜುಮ್ಮಾ ಮಸೀದಿಯ ನಿರ್ಧಾರ ಪ್ರಶ್ನಿಸಿ ಅಬ್ದುಲ್ ಸತ್ತಾರ್ ಮತ್ತು ಮೊಹಮ್ಮದ್ ಮುಸ್ತಫಾ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿದೆ.2024ರ ಅಕ್ಟೋಬರ್ 11ರಂದು ತುರ್ತು ಸಭೆ ನಡೆಸಿ ಅರ್ಜಿದಾರರನ್ನು ಸದಸ್ಯತ್ವದಿಂದ ವಜಾಗೊಳಿಸಿದ್ದ ಮಸೀದಿಯ ವ್ಯವಸ್ಥಾಪನಾ ಸಮಿತಿ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ವ್ಯವಸ್ಥಾಪನಾ ಸಮಿತಿಯ ಮುಂದುವರಿಯಬಹುದು ಎಂದು ಹೇಳಿದೆ. ಅರ್ಜಿದಾರರು ಸದಸ್ಯರಾಗಿವಕ್ಸ್ ಕಾಯ್ದೆ -1995ರ ಕಲಂ 32(2)ಜಿ ಅನುಸಾರ ವ್ಯವಸ್ಥಾಪನಾ ಸಮಿತಿಗೆ ಮುತವಲ್ಲಿಗಳನ್ನು ನೇಮಿಸುವ ಅಥವಾ ತೆಗೆಯುವ ಅಧಿಕಾರ ವಕ್ಸ್ ಮಂಡಳಿಗೆ ಮಾತ್ರವೇ ಇದೆ. ಮುತವಲ್ಲಿಗಳನ್ನು ವಜಾಗೊಳಿಸುವಾಗ ವಕ್ಸ್ ಕಾಯ್ದೆಯ ಕಲಂ 64 ಮತ್ತು ಕರ್ನಾಟಕ ವಕ್ಸ್ ನಿಯಮಗಳು -2017ರ ನಿಯಮ 58ರಡಿ ಇರುವ ಕಾರಣಗಳನ್ನು ಪಾಲಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!