ಮುಖ್ಯಮಂತ್ರಿಗಳು ಹೇಳಿ 20 ದಿನವಾದ್ರೂ ಬಂದಿಲ್ಲ ಗೃಹಲಕ್ಷ್ಮಿ ದುಡ್ಡು, ಎಲ್ಲೋಯ್ತು 5 ಸಾವಿರ ಕೋಟಿ ರೂ? : ಶಾಸಕ ಮಹೇಶ್ ಟೆಂಗಿನಕಾಯಿ

Picture of Savistara

Savistara

Bureau Report

ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲದ ಹಿನ್ನಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಶಾಸಕ ಮಹೇಶ್ ಟೆಂಗಿನಕಾಯಿ ವಿಧಾನಸಭೆ ಅಧಿವೇಶನದಲ್ಲೇ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ ಎಂದರು.

ಅಧಿವೇಶನದ ವೇಳೆ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಹಣ ವರ್ಗಾವಣೆ ಮಾಡುವ ಭರವಸೆ ನೀಡಿದ್ದರು. ಆದರೆ ಸಿಎಂ ಹೇಳಿ ಇಪ್ಪತ್ತು ದಿನಗಳಾದರೂ ಮಹಿಳೆಯರ ಖಾತೆಗೆ ಹಣ ಬಂದಿಲ್ಲ.ಪೂರಕ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಗತ್ಯವಿರುವ ಐದು ಸಾವಿರ ಕೋಟಿ ರೂಪಾಯಿ ಹಣದ ಯಾವುದೇ ಪ್ರಸ್ತಾಪವೇ ಇಲ್ಲ. ಹಾಗಾದರೆ ಆ ಹಣ ಎಲ್ಲಿ ಹೋಯ್ತು ಎಂಬುದು ಸರ್ಕಾರ ಸ್ಪಷ್ಟಪಡಿಸಬೇಕು.ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪವಾದ ನಂತರ ಅಧಿಕಾರಿಗಳಿಗೆ ಮಾಹಿತಿ ನೀಡದಂತೆ ತಾಕೀತು ಮಾಡಲಾಗಿದೆ.

ಹತ್ತನೇ ತಾರೀಖಿನಿಂದಲೇ ಅಧಿಕಾರಿಗಳಿಗೆ ಮಾಹಿತಿ ನೀಡದಂತೆ ಸೂಚನೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಫೆಬ್ರವರಿ–ಮಾರ್ಚ್ ತಿಂಗಳ ಹಣದ ಬಗ್ಗೆ ಮಾಹಿತಿ ಕೇಳಿದ್ದರೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಇತರೆ ಜಿಲ್ಲೆಗಳಿಗೂ ಮಾಹಿತಿ ಕೇಳಿದರೂ ಯಾರೂ ಪ್ರತಿಕ್ರಿಯಿಸಿಲ್ಲ. ಮೊದಲು ಹಣ ಜಮೆಯಾಗಿದೆ ಎಂಬ ಗೊಂದಲಕಾರಿ ಉತ್ತರ ನೀಡಿದ ಅಧಿಕಾರಿಗಳು, ನಂತರ ಕೆಲ ಜಿಲ್ಲೆಗಳಲ್ಲಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಇನ್ನೂ ಜಮೆಯಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಹೇಶ್ ಟೆಂಗಿನಕಾಯಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಶ್ರೀ ಲಿಂಗರಾಜ ಪಾಟೀಲ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷರಾದ ಶ್ರೀ ರಾಜು ಕಾಳೆ, ಪ್ರಮುಖರಾದ ಶ್ರೀ ವಸಂತ ನಾಡಜೋಶಿ, ಶ್ರೀ ಪ್ರವೀಣ ಪವಾರ, ಶ್ರೀ ರಾಮನಗೌಡ ಶೆಟ್ಟನಗೌಡರ, ಶ್ರೀ ರವಿ ನಾಯಕ್, ಶ್ರೀ ಸಿದ್ದು ಮೊಗಲಿಶೆಟ್ಟರ, ಶ್ರೀ ಪ್ರಶಾಂತ ಜಾಧವ ಉಪಸ್ಥಿತರಿದ್ದರು.

[t4b-ticker]
error: Content is protected !!