ಕಾರ್ಕಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ನಿಟ್ಟೆ (Deemed to be University) ಯ ಚಾನ್ಸೆಲ್ಲರ್, ಪ್ರಸಿದ್ಧ ಉದ್ಯಮಿ, ಶಿಕ್ಷಣ ಉದ್ಯಮಿ ಹಾಗೂ ಸಮಾಜ ಸೇವಕ ಎನ್. ವಿನಯ ಹೆಗ್ಡೆ ಅವರು ಡಿಸೆಂಬರ್ 31ರ ತಡರಾತ್ರಿ 12ಕ್ಕೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿದ್ದ ವಿನಯ ಹೆಗ್ಡೆ ಅವರು ನಿಟ್ಟೆ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ಹಾಗೂ ದೇಶದ ಮಟ್ಟದಲ್ಲಿ ಹೆಸರು ಮಾಡಿದ್ದರು. ನಿಟ್ಟೆ ಡೀಮ್ಸ್ ಟು ಬಿ ಯುನಿವರ್ಸಿಟಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಶಿಕ್ಷಣದ ಜೊತೆಗೆ ಆರೋಗ್ಯ, ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಸೇವಾ ಕ್ಷೇತ್ರಗಳಲ್ಲಿಯೂ ಅವರು ಸಕ್ರಿಯರಾಗಿದ್ದರು.ಅವರ ನಿಧನದಿಂದ ಶಿಕ್ಷಣ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ.
ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆ ನಿಧನ
Savistara
Bureau Report
[t4b-ticker]













































