ನಿಟ್ಟೆ ಸಮೂಹ ಸಂಸ್ಥೆ ಸ್ಥಾಪಕ ವಿನಯ್ ಹೆಗ್ಡೆ ನಿಧನ | ಆರ್ ಎಸ್ ಎಸ್ ಸಂತಾಪ

Picture of Savistara

Savistara

Bureau Report

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ, ಪ್ರತಿಷ್ಠಿತ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ, ಉದ್ಯಮಿ, ಶಿಕ್ಷಣತಜ್ಞ ಡಾ| ಎನ್. ವಿನಯ ಹೆಗ್ಡೆ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟುಮಾಡಿದೆ. ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕರಾದ ವಿನಯ್ ಹೆಗ್ಡೆಯವರು ನಿಟ್ಟೆ ಶಿಕ್ಷಣ ಸಂಸ್ಥೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದವರು. ಗ್ರಾಮೀಣ ಪ್ರದೇಶಗಳಲ್ಲಿ ಆಸ್ಪತ್ರೆಯನ್ನು ನಿರ್ಮಿಸುವ ಮೂಲಕ ಲಕ್ಷಾಂತರ ಜನರ ಬದುಕಿಗೆ ಆಸರೆಯಾದವರು. ಸಾವಿರಾರು ಕುಟುಂಬಗಳಿಗೆ ಉದ್ಯೋಗದಾತರಾಗಿದ್ದ ಶ್ರೀ ಎನ್. ವಿನಯ ಹೆಗ್ಡೆಯವರು ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲೂ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ನಿಕಟ ಸಂಪರ್ಕಹೊಂದಿದ್ದ ಶ್ರೀ ಎನ್. ವಿನಯ ಹೆಗ್ಡೆಯವರು ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರವಾಗಿ ಅಗಲಿದ ಚೇತನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸುತ್ತಾ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತಿದ್ದೇವೆ. ಎಂದು ಆರ್ ಎಸ್ ಎಸ್ ಸಂತಾಪ ಸೂಚಿಸಿದೆ.

[t4b-ticker]
error: Content is protected !!