ಆದಿಚುಂಚನಗಿರಿ ಮಠಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ; ಯಾವಾಗ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Picture of Savistara

Savistara

Bureau Report

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ನವೆಂಬರ್​​ನಲ್ಲಿ ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದ ಪ್ರಧಾನಿ ಮೋದಿ ಅವರು ಮತ್ತೊಂದು ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮುಂದಿನ ತಿಂಗಳು ಫೆಬ್ರವರಿ 23ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿ ಮಠಕ್ಕೆ (Adichunchangiri Mutt) ಭೇಟಿ ನೀಡಲಿದ್ದು, ನಿರ್ಮಾಲನಂದ ಶ್ರೀಗಳ ಪಟ್ಟಾಭಿಷೇಕ ಹಾಗೂ ಬಾಲಗಂಗಾಧರನಾಥ ಶ್ರೀಗಳ ಐಕ್ಯ ಸ್ಥಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಕಳೆದ ಕೆಲವು ದಿನಗಳ ಹಿಂದೆಯಷ್ಟೇ ಉಡುಪಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 23ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದಾರೆ.ನಿರ್ಮಾಲನಂದ ಶ್ರೀಗಳ ಪಟ್ಟಾಭಿಷೇಕ ಕಾರ್ಯಕ್ರಮ ಹಾಗೂ ಬಾಲಗಂಗಾಧರನಾಥ ಶ್ರೀಗಳ ಐಕ್ಯ ಸ್ಥಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗಿಯಾಗಲಿದ್ದಾರೆ. ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿರುವ ಪ್ರಧಾನಿ ಮೋದಿ ಅವರು ಆ ನಂತರ ವಿಶೇಷ ವಿಮಾನದ ಮೂಲಕ ಮಂಡ್ಯಕ್ಕೆ ತೆರಳಲಿದ್ದಾರೆ.

ನವೆಂಬರ್​ನಲ್ಲಿ ಉಡುಪಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಕಳೆದ ನವೆಂಬರ್​ 28ರಂದು ಕೃಷ್ಣನೂರು ಉಡುಪಿ ಭೇಟಿ ನೀಡಿದ್ದರು. ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ನರೇಂದ್ರ ಮೋದಿ ಅವರು ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಿದ್ದರು. ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಮೋದಿ, ಸ್ವರ್ಣ ಲೇಪಿತ ಕನಕನ ಕಿಂಡಿ ಉದ್ಘಾಟಿಸಿ, ಅದರ ಮೂಲಕ ಕಡೆಗೋಲು ಕೃಷ್ಣನ ದರ್ಶನ ಪಡೆದಿದ್ದರು. ಬಳಿಕ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳು ‘ಭಾರತ ಭಾಗ್ಯವಿಧಾತ’ ಅಂತ ಬಿರುದು ನೀಡಿ, ಮೋದಿಯವರನ್ನು ಗೌರವಿಸಿದ್ದರು. ಇದಕ್ಕೂ ಮುನ್ನ ಉಡುಪಿಯಲ್ಲಿ ಮೋದಿ ಭರ್ಜರಿ ರೋಡ್ ಶೋ ಮಾಡಿದ್ದರು. ಬಳಿಕ ಉಡುಪಿ ಮಠದಲ್ಲಿ ನಡೆಯುತ್ತಿದ್ದ ಲಕ್ಷ ಗೀತಾ ಕಂಠ ಗೀತಾರಾಧನೆಯಲ್ಲಿ ಪ್ರಧಾನ ಮೋದಿ ಅವರು ಭಾಗವಹಿಸಿದ್ದರು. ಸಾವಿರಾರು ಭಕ್ತರ ಜೊತೆ ಪ್ರಧಾನಿ ಮೋದಿ ಭಾವಪೂರ್ಣವಾಗಿ ಗೀತಾ ಪಠಣದೊಂದಿಗೆ ತೊಡಗಿಸಿಕೊಂಡಿದ್ದರು.

[t4b-ticker]
error: Content is protected !!