ಶಿವಮೊಗ್ಗ ಜಿಲ್ಲೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಸಂಸದ ರಾಘವೇಂದ್ರ ಬಿ ವೈ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಈ ಸಭೆಯಲ್ಲಿ ಕೆಳಕಂಡ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು:
1️⃣ ರಾ.ಹೆ-206 ತುಮಕೂರು-ಶಿವಮೊಗ್ಗ-ಹೊನ್ನಾವರ ಚತುಷ್ಪಥ ರಸ್ತೆ ಕಾಮಗಾರಿ.
2️⃣ ರಾ.ಹೆ-206ರ ಹೊಸೂರು (LC-110) ಮತ್ತು ತಾಳಗುಪ್ಪ (LC-152) ರೈಲ್ವೆ ಮೇಲ್ಸೇತುವೆ ಕಾಮಗಾರಿ.
3️⃣ ರಾ.ಹೆ-169 ನೆಲ್ಲಿಸರ ಕ್ಯಾಂಪ್‌ನಿಂದ ತೀರ್ಥಹಳ್ಳಿ ಪಟ್ಟಣದವರೆಗೆ ಚತುಷ್ಪಥ ರಸ್ತೆ.
4️⃣ ರಾ.ಹೆ-766ಸಿ ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶರಾವತಿ ಹಿನ್ನೀರಿನ ಬಿಕ್ಕೋಡಿ ಸೇತುವೆ ಕಾಮಗಾರಿ.
5️⃣ ಸಾಗರ ಪಟ್ಟಣದಲ್ಲಿ ರಾ.ಹೆ-206ರ ನಾಲ್ಕು ಪಥದ ರಸ್ತೆ ನಿರ್ಮಾಣ.
6️⃣ ರಾ.ಹೆ-766ಸಿ ಶಿಕಾರಿಪುರ ಬೈಪಾಸ್ ರಸ್ತೆ ನಿರ್ಮಾಣ.
7️⃣ ರಾ.ಹೆ-169 ಶಿವಮೊಗ್ಗ-ಮಂಗಳೂರು ರಸ್ತೆಯ ಹರಕೆರೆ ಚತುಷ್ಪಥ ಕಾಮಗಾರಿ.

ಅರಣ್ಯ ಇಲಾಖೆ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಬಿ. ನಿಖಿಲ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ಮತ್ತು ಸಾಗರ ಉಪ ವಿಭಾಗಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್‌ಗಳು (EE, AEE) ಉಪಸ್ಥಿತರಿದರು.













































