ಕೇಂದ್ರ ಗಣಿ ಸಚಿವಾಲಯದ ಅಡಿಯಲ್ಲಿ ಬರುವ ಪ್ರಮುಖ ಕಂಪನಿಯಾದ ‘ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್’ (NALCO), 2025ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಒಟ್ಟು 115 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ (GET) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಗೇಟ್ (GATE) ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ಅರ್ಹತೆ ಮತ್ತು ವಯೋಮಿತಿ:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪೂರ್ಣಾವಧಿಯ ಪದವಿ ಹೊಂದಿರಬೇಕು
ಗೇಟ್ ಸ್ಕೋರ್ :ಗೇಟ್ 2025 (GATE 2025) ಪರೀಕ್ಷೆಯಲ್ಲಿ ಕನಿಷ್ಠ ಶೇ. 65 ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಕಡ್ಡಾಯ.62ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ವರ್ಗದವರಿಗೆ ನಿಯಮದಂತೆ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕದ ವಿವರ:ಸಾಮಾನ್ಯ, ಒಬಿಸಿ (OBC) ಮತ್ತು ಇಡಬ್ಲ್ಯೂಎಸ್ (EWS) ವರ್ಗದವರಿಗೆ: 500 ರೂ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲಅಭ್ಯರ್ಥಿಗಳಿಗೆ: 100 ರೂ.ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಶುಲ್ಕ ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ಗೇಟ್ ಪರೀಕ್ಷೆಯ ಅಂಕಗಳು ಮತ್ತು ವೈಯಕ್ತಿಕ ಸಂದರ್ಶನದ (Interview) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:ಆಸಕ್ತರು ನಮ್ಮೊದ ಅಧಿಕೃತ ವೆಬ್‌ಸೈಟ್ nalcoindia.com ಸಲ್ಲಿಸಬೇಕು.ವೆಬ್‌ಸೈಟ್‌ಗೆ ಭೇಟಿ ನೀಡಿ ‘Careers ವಿಭಾಗವನ್ನು ಕ್ಲಿಕ್ ಮಾಡಿ.ಇಂಜಿನಿಯರ್ ಟ್ರೈನಿ ಹುದ್ದೆಯ ನೇಮಕಾತಿ ಲಿಂಕ್ ಆಯ್ಕೆ ಮಾಡಿ.ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 22, 2025.ಇಂಜಿನಿಯರಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಯುವಕರಿಗೆ ಕೇಂದ್ರ ಸರ್ಕಾರಿ ಸ್ವಾಮ್ಯದ ಈ ಕಂಪನಿಯಲ್ಲಿ ಉದ್ಯೋಗ ಪಡೆಯಲು ಇದು ಸುಸಮಯವಾಗಿದೆ.













































