ರಷ್ಯಾದಿಂದ ತೈಲ ಖರೀದಿ। ಭಾರತದ ಮೇಲೆ ಮತ್ತಷ್ಟು ಸುಂಕ ವಿಧಿಸುವ ಸುಳಿವು ನೀಡಿದ ಟ್ರಂಪ್‌

Picture of Savistara

Savistara

Bureau Report

“ನಾನು ಸಂತೋಷವಾಗಿಲ್ಲ ಎಂದು ಪ್ರಧಾನಿ ಮೋದಿಗೆ ತಿಳಿದಿದೆ”

ಹೊಸದಿಲ್ಲಿ: ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತಿರುವ ಭಾರತದ ಮೇಲೆ ಹೊಸ ಸುಂಕಗಳನ್ನು ವಿಧಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಸುಳಿವು ನೀಡಿದ್ದಾರೆ. “ನಾವು ಅತೃಪ್ತರಾಗಿದ್ದೇವೆಂದು ಅವರಿಗೆ ತಿಳಿದಿದೆ” ಎಂದು ಹೇಳಿದರು.ರವಿವಾರ ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ಮೋದಿ ಬಹಳ ಒಳ್ಳೆಯ ವ್ಯಕ್ತಿ. ನಾನು ಸಂತೋಷವಾಗಿಲ್ಲ ಎಂದು ಅವರಿಗೆ ತಿಳಿದಿದೆ. ನನ್ನನ್ನು ಸಂತೋಷಪಡಿಸುವುದು ಮುಖ್ಯವಾಗಿತ್ತು. ಅವರು ವ್ಯಾಪಾರ ಮುಂದುವರಿಸಿದ್ದಾರೆ ಮತ್ತು ನಾವು ಅವರ ಮೇಲೆ ಶೀಘ್ರದಲ್ಲೇ ಸುಂಕವನ್ನು ಹೆಚ್ಚಿಸಬಹುದು ಎಂದು ಹೇಳಿದ್ದಾರೆ.

ಕಳೆದ ವರ್ಷ ಟ್ರಂಪ್ ಅವರು ಭಾರತದ ಮೇಲೆ 25 ಪ್ರತಿಶತ ಸುಂಕವನ್ನು ಮತ್ತು ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಹೆಚ್ಚುವರಿಯಾಗಿ 25 ಪ್ರತಿಶತ ಸುಂಕವನ್ನು ವಿಧಿಸಿದ್ದರು. ಭಾರತದ ಮೇಲೆ ಒಟ್ಟು 50% ಸುಂಕವನ್ನು ವಿಧಿಸಿದ್ದರು. ಈ ನಿರ್ಧಾರದಿಂದ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಹಳಸಿತ್ತು.ಇತ್ತೀಚೆಗೆ ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ವ್ಯಾಪಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆಯನ್ನು ನಡೆಸಿದ್ದರು. ಇದಾದ ಕೆಲವೇ ವಾರಗಳ ಬಳಿಕ ಟ್ರಂಪ್ ಮತ್ತೆ ಸುಂಕ ಹೆಚ್ಚಳದ ಸುಳಿವು ನೀಡಿದ್ದಾರೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!