ಹೈಕೋರ್ಟ್ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರವಿದ್ದು, ನೂತನ ವಿಧೇಯಕದ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬಿಜೆಪಿ ಸರ್ಕಾರ ಇದ್ದಾಗ ಜಮ್ಮಾ ಬಾಣೆ ಸಮಸ್ಯೆ ಶೇ.95ರಷ್ಟು ಇತ್ಯರ್ಥವಾಗಿತ್ತು. ಅಲ್ಲದೇ, 2024ರಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ಸುದೀರ್ಘವಾಗಿ ವಿಚಾರಣೆ ನಡೆಸಿದ 2024ರಲ್ಲಿ ಜಮ್ಮಾಬಾಣೆ ಕುರಿತು ಸ್ಪಷ್ಟವಾಗಿ ತೀರ್ಮಾನ ನೀಡಿತು. ಜೊತೆಗೆ 30 ದಿನಗಳಲ್ಲಿ ಈ ತೀರ್ಪನ್ನು ಜಾರಿಗೊಳಿಸುವಂತೆ ಸೂಚಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಆದೇಶವನ್ನು ಜಾರಿಗೆ ತರದೇ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿತ್ತು. ಆದರೆ, ರಾಜ್ಯ ಉಚ್ಚ ನ್ಯಾಯಾಲಯ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರ ಆಗುತ್ತಿತ್ತು ಎಂದರು.ಜಮ್ಮಾ ಬಾಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆದರೆ, ಜಿಲ್ಲೆಯ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷತೀತವಾಗಿ ಸಮಿತಿ ರಚಿಸಿ ಹೋರಾಡುತ್ತಾ ಬಂದಿದೆ. ಇದರ ಪರಿಣಾಮವಾಗಿ 2024ರಲ್ಲಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದನ್ನು ಜಾರಿಗೆ ತರುವಲ್ಲಿ ಕಾಂಗ್ರೆಸ್ ವಿಫಲವಾಗಿತ್ತು ಎಂದರು.ಸುದ್ದಿಗೋಷ್ಠಿಯಲ್ಲಿಮಾಜಿ ಸಚಿವ ಮತ್ತು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಕವೀಂದ್ರ ಇದ್ದರು.
ಹೈಕೋರ್ಟ್ ಆದೇಶದಲ್ಲಿ ಜಮ್ಮಾ ಸಮಸ್ಯೆಗೆ ಪರಿಹಾರ ಕಲ್ಪಿಸಿತ್ತು ಮಾಜಿ ಶಾಸಕ ಬೋಪಯ್ಯ
Savistara
Bureau Report
[t4b-ticker]













































