ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಮಂಡಲ ಬಿಜೆಪಿ ಖಂಡನೆ, ಪ್ರತಿಭಟನೆಯ ಎಚ್ಚರಿಕೆ

Picture of Savistara

Savistara

Bureau Report

ಸುಳ್ಯ : ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ದಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಸುಳ್ಯ ಮಂಡಲ ಬಿಜೆಪಿ ಯು ಖಂಡಿಸಿದೆ.ಸುಳ್ಯದ ಶಾಸಕರಾದ ಕು ಭಾಗೀರಥಿ ಮುರುಳ್ಯರವರು ಅತ್ಯಂತ ಕಡು ಬಡ ಕುಟುಂಬದಿಂದ ಬಂದವರಾಗಿದ್ದು ತಮ್ಮ ಸಂಘಟನಾ ಬದ್ಧತೆ ಹಾಗೂ ಕ್ರಿಯಾಶೀಲತೆಯಿಂದ ತಾಲೂಕು ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಜನಸೇವೆ ಸಲ್ಲಿಸಿ ಇದೀಗ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಶಾಸಕರಾಗಿ ಆಯ್ಕೆಯಾದ ದಿನದಿಂದ ನಿರಂತರವಾಗಿ ಕ್ಷೇತ್ರದಲ್ಲಿ ಓಡಾಡುತ್ತ, ವಿರೋಧ ಪಕ್ಷದ ಸದಸ್ಯರಾಗಿದ್ದರೂ, ಸಚಿವರುಗಳಿಗೆ ಮನವಿ ಸಲ್ಲಿಸಿ, ಬೆನ್ನು ಹಿಡಿದು ಓಡಾಡಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ನಿರಂತರ ಪ್ರಯತ್ನ ಪಡುತ್ತಿದ್ದಾರೆ. ದಲಿತರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಿದ್ದು, ಸುಳ್ಯದ ಅಂಬೇಡ್ಕರ್ ಭವನ ಪೂರ್ಣಗೊಳಿಸುವಲ್ಲಿಯೂ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಹೀಗಿರುವಾಗ ಯಾವುದೊ ವೈಯುಕ್ತಿಕ ತೀಟೆಗೋಸ್ಕರ ದಲಿತ ಶಾಸಕಿಯನ್ನು ಹಾಗೂ ನಮ್ಮ ಪಾರ್ಟಿಯನ್ನು ಅವಮಾನಿಸುವ ಹೀನ ಮನಃ ಪ್ರವೃತ್ತಿ ಯಿಂದ ಸಾಮಾಜಿಕ ಜಾಲತಾಣ ದಲ್ಲಿ ಈ ರೀತಿ ಬರೆಯುವ ಕೆಲಸವನ್ನು ಮಾಡಲಾಗುತ್ತಿದೆ.

ದ ಕ ಜಿಲ್ಲೆಯ ಪೊಲೀಸ್ ಮುಖ್ಯಸ್ಥರು ಈ ಕುರಿತು ಕೂಡಲೇ ಕ್ರಮವಹಿಸಿ, ಸದ್ರಿ ವ್ಯಕ್ತಿಯ ಮೇಲೆ ಸುಮೊಟೊ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿ ಜೈಲಿಗಟ್ಟುವ ಕೆಲಸ ಮಾಡಬೇಕು ಎಂದು ಮಂಡಲ ಬಿಜೆಪಿ ಅಗ್ರಹಿಸುತ್ತದೆ. ಇಂತಹ ರೋಗಗ್ರಸ್ತ ಮಾನಸಿಕತೆಯ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪಾರ್ಟಿ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!