ಉಡುಪಿ ಪರ್ಯಾಯ : 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

Picture of Savistara

Savistara

Bureau Report

ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದದಲ್ಲಿ ಶಾಸಕರಾದ ಸುನಿಲಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ,ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!