ರಾಜ್ಯದಲ್ಲಿ ಮತ್ತೆ ಹೆಚ್ಚಿದ ಚಳಿ, ಹಲವೆಡೆ ಮಳೆ ಸಾಧ್ಯತೆ

Picture of Savistara

Savistara

Bureau Report

ಬೆಂಗಳೂರು: ಶೀತಗಾಳಿ, ಮೋಡ ಕವಿದ ವಾತಾವರಣ ಮತ್ತು ತಾಪಮಾನ ಇಳಿಕೆ ಸೇರಿ ಹಲವು ಕಾರಣಗಳಿಂದ ರಾಜ್ಯದ ಹಲವೆಡೆ ಮತ್ತೆ ಥರಗುಟ್ಟಿಸುವ ಚಳಿ ಅನುಭವವಾಗುತ್ತಿದೆ. ಕನಿಷ್ಠ ತಾಪಮಾನದಲ್ಲಿ ದಾವಣಗೆರೆ, ವಿಜಯಪುರ, ಬೀದರ್‌ನಲ್ಲಿ ತಲಾ 9 ಡಿ. ಸೆ., ಧಾರವಾಡ 9.8, ಚಿಂತಾಮಣಿ 10, ಗದಗ 10.8 ಮತ್ತು ಹಾವೇರಿ 10.6 ಡಿ.ಸೆ. ಗುರುವಾರ ದಾಖಲಾಗಿದೆ. ಮುಂದಿನ ಐದು ದಿನಗಳಲ್ಲಿ ಕೆಲ ಪ್ರದೇಶಗಳಲ್ಲಿ 3-5 ಡಿ. ಸೆ. ಉಷ್ಣಾಂಶ ಇಳಿಕೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ

ಮುಂದಿನ 2 ದಿನ ಶೀತ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಪ್ರದೇಶ ಹೊರತುಪಡಿಸಿ ಮೈಸೂರು, ಮಂಡ್ಯ, ಚಿತ್ರದುರ್ಗ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಸಾಮಾನ್ಯಗಿಂತ 3-6 ಡಿ.ಸೆ. ಉಷ್ಣಾಂಶ ಇಳಿಕೆಯಾಗಿದೆ. ಹವಾಮಾನ ಬದಲಾವಣೆಯಿಂದ ಬೆಂಗಳೂರು ನಗರ, ಬೆಂ. ದಕ್ಷಿಣ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಮುಂದಿನ 5 ದಿನ ತುಂತುರು ಮಳೆ ಆಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!