ತಿರುವನಂತಪುರ/ಬೆಂಗಳೂರು: ಕೇರಳ ವಿಧಾನಸಭೆಯಲ್ಲಿಅಂಗೀಕರಿಸಿರುವ ಮಲ ಯಾಳ ಭಾಷಾ ಮಸೂದೆ-2025ರ ವಿರುದ್ಧ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗು ತ್ತಿದ್ದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮಸೂದೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಹೋರಾಟದ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ಶನಿವಾರ ಸುದೀರ್ಘ ಟ್ವಿಟ್ ಮಾಡಿದ್ದಾರೆ. ಭಾಷಾ ಅಲ್ಪಸಂಖ್ಯಾಕರಾದ ಕನ್ನಡಿಗರ ಹಕ್ಕುಗಳನ್ನು ಎತ್ತಿ ಹಿಡಿಯಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ ಮಲಯಾಳ ಭಾಷಾ ಮಸೂದೆ ಕುರಿತ ಕರ್ನಾಟಕದ ಆಕ್ಷೇಪಗಳಲ್ಲಿ ಯಾವುದೇ ಸತ್ಯಾಂಶಗಳಿಲ್ಲ.
ಕೇರಳ ಸರಕಾರ ಜಾತ್ಯತೀತತೆ ಮತ್ತು ಬಹುತ್ವದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ತಿಳಿಸಿದ್ದಾರೆ.
ಭಾಷಾ ಅಲ್ಪಸಂಖ್ಯಾಕರಾದ ಕನ್ನಡ ಹಾಗೂ ತಮಿಳು ಸಮುದಾಯಗಳ ಹಕ್ಕುಗಳನ್ನು ಎತ್ತಿ ಹಿಡಿಯಲಾಗುತ್ತಿದೆ. ಅವರ ಹಿತರಕ್ಷಣೆಗೆ ನಾವು ಬದ್ಧ. ಯಾವುದೇ ಭಾಷೆಯನ್ನು ಹೇರಲಾಗುತ್ತಿಲ್ಲ. ಭಾಷಾ ಸ್ವಾತಂತ್ರÂವನ್ನು ನೀಡಲಾಗುತ್ತಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳು ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಗುಣವಾಗಿ ಮಲಯಾಳ ಭಾಷೆ ಅಲ್ಲದೆ ಶಾಲೆಗಳಲ್ಲಿ ಲಭ್ಯವಿರುವ ಭಾಷೆಗಳನ್ನು ಸ್ವತಂತ್ರವಾಗಿ ಆಯ್ಕೆ ಮಾಡಿಕೊಳ್ಳಬಹುದು. ಇತರ ರಾಜ್ಯಗಳ ಅಥವಾ ವಿದೇಶಗಳ ವಿದ್ಯಾರ್ಥಿಗಳು 9ನೇ ತರಗತಿ, 10ನೇ ತರಗತಿ ಅಥವಾ ಹೈಯರ್‌ಸೆಕೆಂಡರಿ ಹಂತಗಳಲ್ಲಿ ಮಲಯಾಳ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮಿಳು ಮತ್ತು ಕನ್ನಡ ಭಾಷಿಕರು ಸಚಿವಾಲಯ, ಇಲಾಖಾ ಮುಖ್ಯಸ್ಥರು ಮತ್ತು ಸ್ಥಳೀಯ ಕಚೇರಿಗಳೊಂದಿಗೆ ನಡೆಯುವ ಪತ್ರ ವ್ಯವಹಾರದಲ್ಲಿ ತಮ-¾ ಮಾತೃಭಾಷೆಯಲ್ಲೇ ವ್ಯವಹರಿಸಬಹುದು. ಅಧಿಕಾರಿಗಳು ಕೂಡ ಅದೇ ಭಾಷೆಯಲ್ಲೇ ವ್ಯವಹರಿಸುತ್ತಾರೆ ಎಂದು ತಿಳಿಸಿದ್ದಾರೆ.
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲೂ ಮಲಯಾಳ ಭಾಷೆಯನ್ನು ಕಡ್ಡಾಯಗೊಳಿಸಿರುವುದರ ಸಂಬಂಧ ಈಗಾಗಲೇ ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿ ನೆರೆ ರಾಜ್ಯಕ್ಕೆ ಪತ್ರ ಬರೆಯಲಾಗಿದೆ. ಪ್ರಥಮ ಭಾಷೆಯಾಗಿ ಮಲಯಾಳ ಕಲಿಕೆ ಕಡ್ಡಾಯದ ವಿರುದ್ಧ ಅಲ್ಲಿನ ಸಿಎಂಗೂ ಪತ್ರ ಬರೆದಿದ್ದು, ಈ ಸಂಬಂಧ ನಾವು ಹೋರಾಟ ಪ್ರಾರಂಭಿಸುತ್ತೇವೆ.-ಸಿದ್ದರಾಮಯ್ಯ, ಮುಖ್ಯಮಂತ್ರಿ













































