ಶಬರಿಮಲೆ ಚಿನ್ನದ ಕಳವು ಪ್ರಕರಣ: ಪ್ರಧಾನ ಅರ್ಚಕ ಕಂದರಾರು ರಾಜೀವರು SIT ಯಿಂದ ಬ೦ಧನ

Picture of Savistara

Savistara

Bureau Report

ಕೇರಳದ ಸುಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ, ಗರ್ಭಗುಡಿಯ ಚಿನ್ನದ ಕಳವು ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರು ಅವರನ್ನು ವಿಶೇಷ ತನಿಖಾ ತಂಡ (SIT) ಶುಕ್ರವಾರ ಬಂಧಿಸಿದೆ. 2019ರಲ್ಲಿ ದೇವಾಲಯದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಕಾರ್ಯದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ನೀಡಿದ ಹೇಳಿಕೆಗಳ ಆಧಾರದ ಮೇಲೆ ರಾಜೀವರು ಅವರನ್ನು 13ನೇ ಆರೋಪಿಯಾಗಿ ಹೆಸರಿಸಲಾಗಿದೆ. ಧಾರ್ಮಿಕ ನಿಯಮಗಳನ್ನು ಉಲ್ಲಂಘಿಸಿ ದೇವಾಲಯದ ಚಿನ್ನದ ಫಲಕಗಳನ್ನು ಹೊರಗೆ ಕೊಂಡೊಯ್ಯಲು ರಾಜೀವರು “ಮೌನ ಸಮ್ಮತಿ” ನೀಡಿದ್ದರು ಮತ್ತು ಈ ಸಂಚಿನಲ್ಲಿ ಭಾಗಿಯಾಗಿದ್ದರು ಎಂದು ಎಸ್‌ಐಟಿ ತಿಳಿಸಿದೆ. ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಬೆಳವಣಿಗೆಯು ಭಕ್ತರಲ್ಲಿ ತೀವ್ರ ಆಘಾತ ಮೂಡಿಸಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!