ರಾಜ್ಯದ NH-275 ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ತಾಂತ್ರಿಕ ಅನುಮೋದನೆ ಒತ್ತಾಯ : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Picture of Savistara

Savistara

Bureau Report

ರಾಜ್ಯದ NH-275 ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ತಾಂತ್ರಿಕ ಅನುಮೋದನೆ ನೀಡಿ ಹಣಬಿಡುಗಡೆ ಮಾಡಲಾಗಿದೆ ಎಂದು ಮೈಸೂರು_ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕರ್ನಾಟಕದ ಅತ್ಯಂತ ಜನನಿಬಿಡ ಹೆದ್ದಾರಿಗಳಲ್ಲಿ ಒಂದಾದ NH-275 (ಬಂಟ್ವಾಳ-ಬೆಂಗಳೂರು ವಿಭಾಗ) ರಸ್ತೆಯ ಅಭಿವೃದ್ಧಿಗಾಗಿ (ಸಂಪಾಜೆ ಯಿಂದ ಕುಶಾಲನಗರ ವರೆಗೆ) ಭರ್ಜರಿ ಕೊಡುಗೆ ನೀಡಿದ್ದು ಈ ರಸ್ತೆ ಅಭಿವೃದ್ಧಿ ಕಾಣಲಿದೆ ಎಂದಿದ್ದಾರೆ.ಈ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಕ್ಷಣಾತ್ಮಕ ಗೋಡೆಗಳ ನಿರ್ಮಾಣ ಮತ್ತು ಸುರಕ್ಷತಾ ಕಾಮಗಾರಿಗಳಿಗಾಗಿ 94.08 ಕೋಟಿ ರೂಪಾಯಿಗಳ ಆರ್ಥಿಕ ಮತ್ತು ತಾಂತ್ರಿಕ ಮಂಜೂರಾತಿಯನ್ನು ನೀಡಿ ಆದೇಶ ಹೊರಡಿಸಿದ್ದುಯೋಜನೆಯ ಹಿನ್ನೆಲೆ ಮತ್ತು ಉದ್ದೇಶಬಂಟ್ವಾಳ ಮತ್ತು ಬೆಂಗಳೂರು ನಡುವಿನ ಈ ಘಟ್ಟ ಪ್ರದೇಶದ ರಸ್ತೆಯು ಮಳೆಗಾಲದಲ್ಲಿ ಪದೇ ಪದೇ ಭೂಕುಸಿತಕ್ಕೆ ತುತ್ತಾಗುತ್ತಿತ್ತು. ಇದನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ಕಿಮೀ 78.000 ರಿಂದ 125.000 ವರೆಗಿನ (ಸಂಪಾಜೆ ಯಿಂದ ಕುಶಾಲನಗರ ವರೆಗೆ) ವ್ಯಾಪ್ತಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.ಈ ಯೋಜನೆಯನ್ನು EPC (Engineering, Procurement, and Construction) ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದೆ ಎಂದು ತಿಳಿಸಿದ ಅವರುಪ್ರಮುಖ ಕಾಮಗಾರಿಗಳು:ಸಚಿವಾಲಯದ ತಾಂತ್ರಿಕ ವರದಿಯ ಪ್ರಕಾರ, ಯೋಜನೆಯು ರಕ್ಷಣಾತ್ಮಕ ಗೋಡೆಗಳು: ಒಟ್ಟು 1,650 ಮೀಟರ್ ಉದ್ದದ ಆರ್ಸಿಸಿ ಕ್ಯಾಂಟಿಲಿವರ್ ರಿಟೈನಿಂಗ್ ವಾಲ್ ಮತ್ತು ಕಣಿವೆಯ ಬದಿಯಲ್ಲಿ ವಿಶೇಷವಾಗಿ 110 ಮೀಟರ್ ಉದ್ದದ ಪ್ರೆಶರ್ ರಿಲೀಫ್ ಗೋಡೆಗಳನ್ನು ನಿರ್ಮಿಸಲಾಗುವುದು. ಬ್ರೆಸ್ಟ್ ವಾಲ್ ಮತ್ತು ಚರಂಡಿ: ಗುಡ್ಡದ ಬದಿಯಲ್ಲಿ ಮಣ್ಣು ಕುಸಿಯದಂತೆ 1,910 ಮೀಟರ್ ಉದ್ದದ ಬ್ರೆಸ್ಟ್ ವಾಲ್ ಮತ್ತು ನೀರು ಸರಾಗವಾಗಿ ಹರಿಯಲು 2,720 ಮೀಟರ್ ಉದ್ದದ ಚೂಟ್ ಡ್ರೈನ್ಗಳನ್ನು ನಿರ್ಮಿಸಲಾಗುತಿದೆ ಎಂದಿದ್ದಾರೆ.ತಿರುವುಗಳ ಸುಧಾರಣೆ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು 17 ಆಯ್ದ ಸ್ಥಳಗಳಲ್ಲಿ ಒಟ್ಟು 1,690 ಮೀಟರ್ ಉದ್ದದ ರಸ್ತೆಯನ್ನು ವಿಸ್ತರಿಸಲಾಗುತಿದೆ.ಮೋರಿಗಳ ಪುನರ್ನಿರ್ಮಾಣ: ಕಿಮೀ 77.750 ಮತ್ತು 89.670 ರಲ್ಲಿ ಹಳೆಯದಾದ ಎರಡು ಬಾಕ್ಸ್ ಮೋರಿಗಳನ್ನು ಮರುನಿರ್ಮಾಣ ಮಾಡಲಾಗುವುದು. ಸುರಕ್ಷತಾ ಕ್ರಮಗಳು: ರಕ್ಷಣಾತ್ಮಕ ಕ್ರಾಶ್ ಬ್ಯಾರಿಯರ್ಗಳು ಮತ್ತು ಆಧುನಿಕ ಸಂಚಾರ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು ಎಂದರು ರೂ. 94.08 ಕೋಟಿ (ಜಿಎಸ್ಟಿ ಮತ್ತು ನಿರ್ವಹಣಾ ವೆಚ್ಚಗಳು ಸೇರಿ). ವೆಚ್ಚದ ಯೋಜನೆಯು ಮಳೆಗಾಲವನ್ನೂ ಒಳಗೊಂಡಂತೆ 18 ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ. ನಿರ್ವಹಣೆ: ಗುತ್ತಿಗೆದಾರರು ಕಾಮಗಾರಿ ಮುಗಿದ ನಂತರ ಮುಂದಿನ 10 ವರ್ಷಗಳ ಕಾಲ ರಸ್ತೆಯ ದೋಷ ಹೊಣೆಗಾರಿಕೆ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!