ಸುಪ್ರೀಂಕೋರ್ಟ್ ಆದೇಶದಂತೆ ಕಾಲಮಿತಿಯೊಳಗೆ ಜಿಬಿಎ ಪಾಲಿಕೆಗಳ ಚುನಾವಣೆ-ಡಿಕೆಶಿ

Picture of Savistara

Savistara

Bureau Report

ಬೆಂಗಳೂರು: ‘ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆನಿಗದಿತ ದಿನದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದರು.

ಅರಮನೆ ಮೈದಾನ ಆವರಣದಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಪ್ರಮಾಣಪತ್ರ ಸಲ್ಲಿಸಿದೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಬೇಕು’ ಎಂದರು.ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ‘ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಸಮಿತಿ ತೀರ್ಮಾನ ಮಾಡಲಿದೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತು ಕೇಳಿಬಂದಿವೆ. ಇದನ್ನು ನಾನು ಗಮನಿಸಿಲ್ಲ. ತಪ್ಪಾಗಿದ್ದರೆ ಸರಿಪಡಿಸಲು ಅವರಿಗೆ ಸೂಚಿಸಲಾಗುವುದು. ನಾವು ಯಾವುದರಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದರು.’ಚುನಾವಣೆ ನಡೆಸಲು ನ್ಯಾಯಾಲಯದ ಬಳಿ ಸಮಯ ಕೇಳುತ್ತೀರಾ’ ಎಂಬ ಪ್ರಶ್ನೆಗೆ ‘ಯಾವುದೇ ಕಾಲಾವಕಾಶ ಕೇಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಚುನಾವಣೆ ನಿಮ್ಮ ಪಾಲಿಗೆ ಸವಾಲಿನದ್ದಾಗಿದೆಯಲ್ಲವೇ?’ ಎಂದಾಗ, ‘ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಕಾರ್ಯಕರ್ತರಿಗೆ ಅಧಿಕಾರ ಕೊಡುವುದು, ಹೊಸ ನಾಯಕರನ್ನು ತಯಾರು ಮಾಡುತ್ತಿದ್ದೇವೆ. ನಾವು ಮಾಡುತ್ತಿರುವ ಕೆಲಸಕ್ಕೆ ಜನ ಬೆಂಬಲ ನೀಡುವ ವಿಶ್ವಾಸವಿದೆ. ನಾವು ಐದೂ ಪಾಲಿಕೆಗಳಲ್ಲೂ ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.`ಬಿಜೆಪಿ ಹಾಗೂ ಜೆಡಿಎಸ್ ಫ್ರೆಂಡ್ಲಿ ಫೈಟ್’ ವಿಚಾರವಾಗಿ ಕೇಳಿದಾಗ, ‘ಅವರು ಏನಾದರೂ ಮಾಡಿಕೊಳ್ಳಲಿ. ಜತೆಯಾಗಿಯಾದರೂ ಚುನಾವಣೆ ಮಾಡಲಿ, ಬೇರೆಯಾಗಿ ಬೇಕಾದರೂ ಮಾಡಲಿ. ಅವರು ಸಂಸತ್ ಚುನಾವಣೆಯಲ್ಲಿ ಒಟ್ಟಿಗೆ ಚುನಾವಣೆ ಎದುರಿಸಿದಂತೆ ವಿಧಾನಸಭೆ ಹಾಗೂ ಪಾಲಿಕೆ ಚುನಾವಣೆಯನ್ನು ಮಾಡಿದರೆ ನೇರ ಹಣಾಹಣಿ ಇರಲಿದೆ’ ಎಂದರು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!