ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು: ಭಾರೀ ಮಳೆಗೆ ಹೈರಾಣಾದ ಕಾಫಿ, ಅಡಿಕೆ ಬೆಳೆಗಾರರು

Picture of Savistara

Savistara

Bureau Report

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಾರರು ಕಂಗಲಾಗಿದ್ದಾರೆ.ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಚಿಕ್ಕಮಗಳೂರು ಕೆಲವು ಭಾಗದಲ್ಲಿ ಮಳೆಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಗಾಳಿ ಬೀಸಿದ್ದು ವಿಪರೀತ ಚಳಿಯ ವಾತಾವರಣದಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ.ವರ್ಷದ ಮೊದಲ ವರ್ಷಧಾರೆಗೆ ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇದ್ದಕ್ಕಿಂದಂತೆ ಆರಂಭವಾದ ಧಾರಾಕಾರ ಮಳೆಯಿಂದ ಬಾರೀ ನಷ್ಟ ಉಂಟಾಗಿದೆ.

ಈಗಾಗಲೇ ಕಾಫಿ ಮತ್ತು ಅಡಿಕೆ ಕೊಯ್ದು ಆರಂಭವಾಗಿದ್ದು, ಮೋಡ ಕವಿದ ವಾತಾವರಣದಲ್ಲಿ ಅಡಿಕೆ ಮತ್ತು ಕಾಫಿ ಕಾಳು ಒಣಗಿಸುವುದು ದೊಡ್ಡ ಸವಾಲಾಗಿತ್ತು.ಅಕಾಲಿಕ ಮಳೆಯಿಂದ ಬೆಳೆಗಾರರು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದ್ದಾರೆ.ಮಳೆಯಿಂದ ಭತ್ತದಕ್ಕೂ ಹಾನಿಯಾಗಿದೆ. ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳು ಮಳೆಗೆ ಗಿಡದಿಂದ ಉದುರುವ ಆತಂಕ ಎದುರಾಗಿದೆ. ಒಟ್ಟಾರೆಯಾಗಿ ವರ್ಷದ ಮೊದಲ ವರ್ಷಧಾರೆ ರೈತರು ಮತ್ತು ಬೆಳೆಗಾರರಲ್ಲಿ ಆತಂಕವನ್ನು ಮೂಡಿಸಿದೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!