ಕುದುರೆಮುಖ, ಸೋಮೇಶ್ವರ, ಮೂಕಾಂಬಿಕಾ ವಲಯದಲ್ಲಿ ಟ್ರೆಕ್ಕಿಂಗ್‌ಗೆ ತಾತ್ಕಾಲಿಕ ಬ್ರೇಕ್!

Picture of Savistara

Savistara

Bureau Report

ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಚಾರಣ (Trekking) ಪ್ರದೇಶಗಳಲ್ಲಿ ಇಂದಿನಿಂದಲೇ (ಜ.14) ಅನ್ವಯವಾಗುವಂತೆ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ಮತ್ತು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದೊಳಗಿನ ಚಾರಣ ಮಾರ್ಗಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.

ಪ್ರಮುಖ ನಿಷೇಧಿತ ಚಾರಣ ಮಾರ್ಗಗಳು:.

  • ಗಂಗಡಿಕಲ್ಲು
  • ಕುದುರೆಮುಖ ಶಿಖರ
  • ಕುರಿಂಜಲ್
  • ವಾಲಿಕುಂಜ (ಎಸ್‌ಕೆ ಬಾರ್ಡರ್ ಹಾಗೂ ಕರ್ವಾಶೆ ಮಾರ್ಗ)
  • ನರಸಿಂಹ ಪರ್ವತ (ಕಿಗ್ಗಾ ಹಾಗೂ ಮಲಂದೂರು ಮಾರ್ಗ)
  • ಕೊಡಚಾದ್ರಿ (ವಾಲೂರು, ಹಿಡ್‌ಲುಮನೆ ಫಾಲ್ಸ್ ಮಾರ್ಗ)

ಅರಣ್ಯ ಅಧಿಕಾರಿಗಳು ಈ ಪ್ರದೇಶಗಳಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲು ಮತ್ತು ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಲು ಸೂಚಿಸಿದ್ದಾರೆ. ಸಾಹಸ ಪ್ರಿಯರು ಹಾಗೂ ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಸಹಕರಿಸಬೇಕು. ನಿಯಮ ಉಲ್ಲಂಘಿಸಿ ಅರಣ್ಯ ಪ್ರವೇಶಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!