ಜ.20ರಂದು ಕಾರ್ಯಾಧ್ಯಕ್ಷ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಸಾಧ್ಯತೆ

Picture of Savistara

Savistara

Bureau Report

ನವದೆಹಲಿ: ಪಕ್ಷ ಸಂಘಟನೆಯ ಭಾಗವಾಗಿ ಇದೇ ತಿಂಗಳು ಜ. 20ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವರು ಹಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬಳಿಕ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.ಕಳೆದ ಡಿಸೆಂಬರ್ ಆರಂಭದಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆಯಾಗಿದ್ದರು. ಜ.19 ರಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದು, 20 ರಂದು ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ವರದಿಗಳು ಉಲ್ಲೇಖಿಸಿವೆ.ಪಕ್ಷದ ಮೂಲಗಳ ಪ್ರಕಾರ, ಜ. 20ರಂದು ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಸಿಎಂಗಳು, ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪದಾಧಿಕಾರಿಗಳನ್ನು ದೆಹಲಿಯಲ್ಲಿರುವಂತೆ ಕೇಳಿಕೊಳ್ಳಲಾಗಿದೆ. ಬಿಜೆಪಿಯ ಮುಖ್ಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ್ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರ ಹೆಸರನ್ನು ಘೋಷಿಸಲಿದ್ದಾರೆ ಎನ್ನಲಾಗಿದೆ.

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಮೂರು ಸೆಟ್‌ಗಳನ್ನು ನಾಮಪತ್ರಗಳ ಸಲ್ಲಿಸಲಿದ್ದು, ಒಂದು ಸೆಟ್‌ನಲ್ಲಿ 20ಕ್ಕೂ ಹೆಚ್ಚು ಚುನಾಯಿತ ರಾಜ್ಯಾಧ್ಯಕ್ಷ ಸಹಿ, ಮತ್ತೊಂದರಲ್ಲಿ ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ ನಡ್ಡಾ ಅವರ ಸಹಿ ಇರುತ್ತದೆ. ಮೂರನೇ ಸೆಟ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಮಂಡಳಿಯ ಸದಸ್ಯರ ಸಹಿ ಇರುತ್ತದೆ. ಈ ಮೂರರಲ್ಲಿ ಒಂದೇ ಹೆಸರು ನಾಮನಿರ್ದೇಶನಗೊಂಡರೆ, ಅದೇ ದಿನ ರಾಷ್ಟ್ರೀಯ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಏತನ್ಮಧ್ಯೆ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಇತ್ತೀಚೆಗೆ ಸಭೆ ನಡೆದಿದ್ದು, ಬಿಜೆಪಿ ಅಧ್ಯಕ್ಷರ ಚುನಾವಣೆ ಸಂಬಂಧ ಚರ್ಚಿಸಿದ್ದಾರೆ. ಸಭೆಯಲ್ಲಿ ಕಾರ್ಯಾಧ್ಯಕ್ಷ ನಿತಿನ್ ನಬಿನ್, ಬಿ.ಎಲ್. ಸಂತೋಷ್, ಸುನಿಲ್ ಬನ್ಸಾಲ್, ಅರುಣ್ ಸಿಂಗ್ ಮತ್ತು ತರುಣ್ ಚುಗ್ ಉಪಸ್ಥಿತರಿದ್ದರು ಎನ್ನಲಾಗಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!